ರಾಷ್ಟ್ರೀಯ

ತಮಿಳುನಾಡಿನಲ್ಲಿ ಒಂದೇ ದಿನ 527 ಹೊಸ ಕೊರೋನಾ ಪ್ರಕರಣಗಳು ಪತ್ತೆ

Pinterest LinkedIn Tumblr


ಚೆನ್ನೈ: ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ತೀವ್ರ ವ್ಯಾಪಕವಾಗಿ ಹರಡುತ್ತಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 527 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,550ಕ್ಕೆ ಏರಿಕೆಯಾಗಿದೆ.

ಕೊಯಂಬೆಡು ಮಾರುಕಟ್ಟೆಗೆ ಸಂಬಂಧಿಸಿದಂತೆ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ತಮಿಳುನಾಡು ಆರೋಗ್ಯ ಇಲಾಖೆ ತಿಳಿಸಿದೆ.

ತಮಿಳುನಾಡು ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, ಒಟ್ಟು 3550 ಸೋಂಕಿತರ ಪೈಕಿ 1,409 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೋನಾ ವೈರಸ್ ನಿಂದ ಇದುವರೆಗೆ 31 ಮಂದಿ ಮೃತಪಟ್ಟಿದ್ದಾರೆ.

ಈ ಮಧ್ಯೆ, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಬರೊಬ್ಬರಿ 2,573 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 42,836ಕ್ಕೆ ಏರಿಕೆಯಾಗಿದೆ.ಈ ಪೈಕಿ 11,762 ಮಂದಿ ಸೋಂಕಿತರು ಗುಣಮುಖರಾಗಿದ್ದು, 29, 685 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.