ರಾಷ್ಟ್ರೀಯ

ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಸರಕಾರ ಸಜ್ಜು; ವಿಮಾನಗಳ ಪಟ್ಟಿ ಬಿಡುಗಡೆ

Pinterest LinkedIn Tumblr

ಬೆಂಗಳೂರು: ಕೋವಿಡ್-19 ಸೋಂಕಿನ ಕಾರಣದಿಂದ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಸರಕಾರ ಸಜ್ಜಾಗಿದೆ. ಒಟ್ಟು ಏಳು ದಿನಗಳ ಕಾಲ 64 ವಿಮಾನಗಳಲ್ಲಿ ವಿದೇಶದಲ್ಲಿರುವ ಭಾರತೀಯರನ್ನು ಕರೆತರಲು ಸರಕಾರ ಸಜ್ಜಾಗಿದ್ದು, ವಿಮಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿದೇಶದಲ್ಲಿರುವ ಪ್ರಜೆಗಳನ್ನು ಭಾರತಕ್ಕೆ ಕರೆ ತರುವ ಕಾರ್ಯಾಚರಣೆಯು ಮೇ 7ರಿಂದ ಹಂತಹಂತವಾಗಿ ಆರಂಭವಾಗಲಿದೆ.

ಯುಎಇ, ಅಮೆರಿಕ, ಇಂಗ್ಲೆಂಡ್, ಮಲೇಷ್ಯಾ, ಸಿಂಗಾಪುರ್, ಫಿಲಿಪ್ಪಿನ್ಸ್, ಸೌದಿ ಅರೇಬಿಯಾ, ಕತಾರ್, ಬಾಂಗ್ಲಾದೇಶ, ಬಹ್ರೇನ್, ಕುವೈತ್ ಮತ್ತಿತ್ತರ ದೇಶಗಳಿಂದ ಅನಿವಾಸಿ ಭಾರತೀಯರನ್ನು ಕರೆತರಬೇಕಿದೆ. ಇನ್ನು ಯುಎಇ ಮತ್ತು ಮಾಲ್ಡೀವ್ಸ್ ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಇಂದು ನೌಕಾಸೇನೆಯ 3 ಹಡಗುಗಳನ್ನು ಕಳುಹಿಸಲಾಗಿದೆ.

ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಟ್ಟು ಮೂರು ವಿಮಾನಗಳು ಬರಲಿದೆ. ಎರಡನೇ ದಿನ ಲಂಡನ್ ನಿಂದ ವಿಮಾನ ಬಂದರೆ, ಐದನೇ ದಿನ ಅಮೇರಿಕದಿಂದ ವಿಮಾನ ಬರಲಿದೆ. ಮತ್ತು ಆರನೇ ದಿನ ಸಿಂಗಾಪುರದ ಭಾರತೀಯರನ್ನು ಹೊತ್ತ ವಿಮಾನ ಬೆಂಗಳೂರಿನಲ್ಲಿ ಇಳಿಯಲಿದೆ.

ಮುಂಬೈ ಬಂದರಿನಿಂದ ಐಎನ್ಎಸ್ ಜಲಾಶ್ವ, ಐಎನ್ಎಸ್ ಮಗಾರ್, ಐಎನ್ಎಸ್ ಶಾರ್ದೂಲ್ ಹಡಗುಗಳನ್ನು ಗಲ್ಫ್ ರಾಷ್ಟರಗಳಿಗೆ ಕಳುಹಿಸಲಾಗಿದ್ದು ಭಾರತಕ್ಕೆ ಮರಳುವ ಅನಿವಾಸಿಗಳನ್ನು ಕರೆತರಲಾಗುವುದು. ಐಎನ್ಎಸ್ ಜಲಾಶ್ವ ಭಾರತೀಯ ನೌಕೆ ಸೇನೆಯ ಎರಡನೇ ಅತೀ ದೊಡ್ಡ ಹಡಗಾಗಿದ್ದು ಒಂದೇ ಬಾರಿಗೆ 500 ಜನರನ್ನು ಕರೆತರುವ ಸಾಮರ್ಥ್ಯ ಹೊಂದಿದೆ.

ಕೇರಳ ರಾಜ್ಯಕ್ಕೆ ಅತೀ ಹೆಚ್ಚು ಅಂದರೆ 15ವಿಮಾನಗಳು ಬಂದು ಇಳಿಯಲಿದೆ. ಮಲೇಶಿಯಾದಿಂದ ಎರಡು ವಿಮಾನ ಬಿಟ್ಟರೆ ಉಳಿದೆಲ್ಲವೂ ಗಲ್ಫ್ ದೇಶಗಳಿಂದ ವಿಮಾನಗಳು ಬರಲಿದೆ. ಯುಎಇ ನಿಂದ ಮೂರು ವಿಮಾನಗಳು, ಕತಾರ್ ನಿಂದ ಎರಡು, ಸೌದಿ ಅರೇಬಿಯಾದಿಂದ 3, ಬಹ್ರೇನ್ ನಿಂದ 2, ಕುವೈಟ್, ಮಲೇಶಿಯಾದಿಂದ 2, ಒಮಾನ್ ನಿಂದ ಒಂದು ವಿಮಾನ ಕೇರಳಕ್ಕೆ ಬಂದು ಇಳಿಯಲಿದೆ. ಕೇರಳದ ಕೊಚ್ಚಿ, ಕೋಯಿಕ್ಕೋಡ್ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ವಿಮಾನಗಳು ಬರಲಿದೆ.

ತಮಿಳುನಾಡಿಗೆ ವಿದೇಶದಿಂದ 11 ವಿಮಾನಗಳು ಬಂದಿಳಿಯಲಿದೆ. ಮಹಾರಾಷ್ಟ್ರಕ್ಕೆ 7, ದಿಲ್ಲಿಗೆ 11, ತೆಲಂಗಾಣಕ್ಕೆ 7, ಗುಜರಾತ್ ಗೆ 5, ಜಮ್ಮು ಕಾಶ್ಮೀರ ಮತ್ತು ಕರ್ನಾಟಕಕ್ಕೆ ತಲಾ ಮೂರು, ಉತ್ತರ ಪ್ರದೇಶ ಮತ್ತು ಪಂಜಾಬ್ ತಲಾ ಒಂದು ವಿಮಾನಗಳು ಬಂದಿಳಿಯಲಿದೆ.

Comments are closed.