ರಾಷ್ಟ್ರೀಯ

ತಮಿಳುನಾಡಿನಲ್ಲಿ ಒಂದೇ ದಿನ 771 ಹೊಸ ಕೊರೊನಾ ವೈರಸ್ ಪ್ರಕರಣ

Pinterest LinkedIn Tumblr


ಚೆನ್ನೈ: ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 771 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 4829ಕ್ಕೆ ಏರಿಕೆಯಾಗಿದೆ.

ತಮಿಳುನಾಡು ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಒಟ್ಟು 771 ಮಂದಿಗೆ ಕೊವಿಡ್-19 ದೃಢಪಟ್ಟಿದ್ದು, ಈ ಪೈಕಿ ಚೆನ್ನೈ ನಗರದಲ್ಲಿಯೇ 324 ಮಂದಿಗ ಸೋಂಕು ತಗುಲಿದೆ. ಇದರೊಂದಿಗೆ ಚೆನ್ನೈನಲ್ಲಿ ಸೋಂಕಿತರ ಸಂಖ್ಯೆ 2328ಕ್ಕೆ ಏರಿಕೆಯಾಗಿದೆ.

ಈ ಮಧ್ಯೆ, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಬರೊಬ್ಬರಿ 2,680 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 49,391ಕ್ಕೆ ಏರಿಕೆಯಾಗಿದೆ.ಈ ಪೈಕಿ 14,182 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Comments are closed.