ರಾಷ್ಟ್ರೀಯ

ಅನಾರೋಗ್ಯದಿಂದ ಪೊಲೀಸ್ ಸಾವು, ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್!

Pinterest LinkedIn Tumblr


ನವದೆಹಲಿ: ಹುಷಾರು ತಪ್ಪಿದ್ದರಿಂದ ದೆಹಲಿಯ ಆರ್ಎಂಎಲ್ ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಒಬ್ಬರು ನಿನ್ನೆ ಮೃತಪಟ್ಟಿದ್ದು ಇಂದು ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದು ಆತಂಕ ಸೃಷ್ಟಿಸಿದೆ.

ವಾಯುವ್ಯ ದೆಹಲಿಯ ಭಾರತ್ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಹುಷಾರು ತಪ್ಪಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಕೋವಿಡ್ -19 ವೈರಸ್ ಆತಂಕ ಇದ್ದಿದ್ದರಿಂದ ವೈದ್ಯರು ಪೊಲೀಸ್ ಅಧಿಕಾರಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿದ್ದರು. ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ.

ಮೃತ ಪೊಲೀಸ್ ಪತ್ನಿ ಮತ್ತು ಮೂರು ವರ್ಷದ ಮಗುವನ್ನು ಅಗಲಿದ್ದಾರೆ.

Comments are closed.