ಚೀನಾದ ವುಹಾನ್ ನಲ್ಲಿ ಮೊದಲು ಪತ್ತೆಯಾಗಿದ್ದ ಕೊರೊನಾ ವೈರಸ್ ವಿಶ್ವಾದ್ಯಂತ 2ಲಕ್ಷದ 48 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ. ಭಾರತದಲ್ಲಿ ಪಾಸಿಟಿವ್ ಪ್ರಕರಣ 74,000 ಸಾವಿರ ದಾಟಿದೆ.
-ದೆಹಲಿಯಲ್ಲಿ 359, ರಾಜಸ್ತಾನ 87, ಒಡಿಶಾ 101 ಹೊಸ ಪ್ರಕರಣಗಳು ಇಂದು ಬೆಳಕಿಗೆ ಬಂದಿದೆ. ಜತೆಗೆ ದೆಹಲಿಯಲ್ಲಿ 20 ಮಂದಿ ಇಂಧು ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 74,877ಕ್ಕೆ ಏರಿಕೆಯಾಗಿದೆ. 24,801 ಮಂದಿ ಗುಣಮುಖರಾಗಿದ್ದು, 2,435 ಮಂದಿ ಸಾವನ್ನಪ್ಪಿದ್ದಾರೆ.
-ಕರ್ನಾಟಕದಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 925ಕ್ಕೆ ಏರಿಕೆಯಾಗಿದೆ. 31 ಮಂದಿಯ ಸಾವಾಗಿದ್ದು, 433 ಮಂದಿ ಗುಣಮುಖರಾಗಿದ್ದಾರೆ. ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ರಾಜ್ಯ 13ನೇ ಸ್ಥಾನದಲ್ಲಿದೆ.
-ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಸೋಂಕಿತರ ಸಂಖ್ಯೆ 74,292ಕ್ಕೆ ಏರಿಕೆಯಾಗಿದೆ. 24,422 ಮಂದಿ ಗುಣಮುಖರಾಗಿದ್ದು, 2,415 ಮಂದಿ ಸಾವನ್ನಪ್ಪಿದ್ದಾರೆ. ಸೋಂಕಿತ ಪ್ರಕರಣದ ದೇಶಗಳ ಪಟ್ಟಿಯಲ್ಲಿ ಭಾರತ 12 ನೇ ಸ್ಥಾನದಲ್ಲಿದೆ. ಕಳೆದ ವಾರ ಭಾರತ 15 ನೇ ಸ್ಥಾನದಲ್ಲಿತ್ತು.
-ವಿಶ್ವದಾದ್ಯಂತ ಕೊರೊನಾ ವೈರಸ್ 2 ಲಕ್ಷ 92ಸಾವಿರಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ. 43ಲಕ್ಷದ 41 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ಇದರಲ್ಲಿ 16ಲಕ್ಷದ 02 ಸಾವಿರ ಮಂದಿ ಗುಣಮುಖರಾಗಿದ್ದಾರೆ.
-ಅಮೆರಿಕದಲ್ಲಿ ಅತೀ ಹೆಚ್ಚು ಮಂದಿ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದು. ಸೋಂಕಿತ ಪ್ರಕರಣಗಳಲ್ಲಿ ಮೊದಲ ಸ್ಥಾನದಲ್ಲಿದೆ. ಇಲ್ಲಿ 14 ಲಕ್ಷದ 08 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿತರಿದ್ದು, 83,400ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಪಟ್ಟಿಯಲ್ಲಿ ಕೂಡ ಮೊದಲನೇ ಸ್ಠಾನದಲ್ಲಿದೆ.
-ಸೋಂಕಿತ ಪ್ರಕರಣಗಳಲ್ಲಿ ಎರಡನೇ ಸ್ಥಾನದಲ್ಲಿ ಸ್ಪೇನ್ ಇದ್ದು 2 ಲಕ್ಷದ 69ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. 26,900ಕ್ಕೂ ಹೆಚ್ಚು ಮಂದಿ ಕೊರೊನಾಗೆ ಇಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಚಾರ್ಟ್ ನಲ್ಲಿ ಐದನೇ ಸ್ಥಾನದಲ್ಲಿದೆ.
-ರಷ್ಯ ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತಲುಪಿದೆ. 2 ಲಕ್ಷದ 32 ಸಾವಿರ ಮಂದಿ ಇಲ್ಲಿ ಸೋಂಕಿತರಿದ್ದಾರೆ. 2,116 ಮಂದಿ ಸಾವನ್ನಪ್ಪಿದ್ದಾರೆ.
– ಯುಕೆ ಸೋಂಕಿತರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ತಲುಪಿದೆ. ಇಲ್ಲಿ 2ಲಕ್ಷದ 26 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. 32,600ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ. ಮೃತಪಟ್ಟವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
-ಸೋಂಕಿತರ ಪಟ್ಟಿಯಲ್ಲಿ ಇಟಲಿ ಐದನೇ ಸ್ಥಾನಕ್ಕೆ ಇಳಿದಿದ್ದು, ಮೃತಪಟ್ಟವರ ಚಾರ್ಟ್ ನಲ್ಲಿ ಮೂರನೇ ಸ್ಥಾನದಲ್ಲಿದೆ. ಇಲ್ಲಿ 2ಲಕ್ಷದ 21ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. 30,900ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ.
ಫ್ರಾನ್ಸ್ ಸೋಂಕಿತರ ಪಟ್ಟಿಯಲ್ಲಿ 6 ನೇ ಸ್ಥಾನದಲ್ಲಿದ್ದು, ಇಲ್ಲಿ 1 ಲಕ್ಷದ 78 ಸಾವಿರ ಸೋಂಕಿತ ಪ್ರಕರಣ ಬೆಳಕಿಗೆ ಬಂದಿದೆ. 26,990ಕ್ಕೂ ಹೆಚ್ಚು ಮಂದಿ ಇಲ್ಲಿ ಸಾವನ್ನಪ್ಪಿದ್ದು ಮೃತಪಟ್ಟವರ ಚಾರ್ಟ್ ನಲ್ಲಿ 4 ನೇ ಸ್ಥಾನದಲ್ಲಿದೆ.
Comments are closed.