ರಾಷ್ಟ್ರೀಯ

ವಿಡಿಯೋ ಕಾನ್ಫರೆನ್ಸ್‌ ಮೂಲಕ ಬಾಬರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆ

Pinterest LinkedIn Tumblr


ಲಖನೌ: 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಮುಂದುವರಿಸಲು ಸಿಬಿಐ ವಿಶೇಷ ನ್ಯಾಯಾಲಯ ತೀರ್ಮಾನಿಸಿದೆ.

ಆಗಸ್ಟ್‌ 31ರ ಒಳಗಾಗಿ ವಿಚಾರಣೆ ಮುಗಿಸುವಂತೆ ಮೇ 8ರಂದು ಸುಪ್ರೀಂ ಕೋರ್ಟ್‌ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯದ ಈ ತೀರ್ಮಾನ ಮಹತ್ವ ಪಡೆದುಕೊಂಡಿದೆ.

ಇದಕ್ಕೂ ಮುನ್ನ ಏಪ್ರಿಲ್‌ 20ರೊಳಗೆ ವಿಚಾರಣೆ ಮುಗಿಸಲು ಸಮಯ ನಿಗದಿಯಾಗಿತ್ತಾದರೂ ಲಾಕ್‌ಡೌನ್‌ನಿಂದ ಕೋರ್ಟ್‌ಗಳನ್ನು ಬಂದ್‌ ಮಾಡಿದ ಹಿನ್ನೆಲೆಯಲ್ಲಿ ಅದು ಸಾಧ್ಯವಾಗಿರಲಿಲ್ಲ.

ಬಿಜೆಪಿ ಹಿರಿಯ ಮುಖಂಡರಾದ ಎಲ್‌.ಕೆ. ಆಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ ಸೇರಿದಂತೆ ಹಲವರು ಈ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

ನ್ಯಾಯಾಲಯ ಈಗಾಗಲೇ ಸಿಬಿಐ ಮುಂದಿರಿಸಿದ ಎಲ್ಲಾ ಸಾಕ್ಷ್ಯಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಸಲ್ಲಿಕೆಯಾಗಿದ ಸಾಕ್ಷ್ಯಗಳ ಬಗ್ಗೆ ಮಾಹಿತಿಯನ್ನು ಆರೋಪಿಗಳಿಗೆ ತಲುಪಿಸುವ ಪ್ರಕ್ರಿಯೆ ನಡೆಯಬೇಕಿದೆ. ಮೇ 18 ರಂದು ಮುಂದಿನ ವಿಚಾರಣೆ ನಡೆಯಲಿದೆ.

Comments are closed.