ರಾಷ್ಟ್ರೀಯ

ಆಗಸ್ಟ್‌ ಒಳಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭ ಸಾಧ್ಯತೆ: ನಾಗರಿಕ ವಿಮಾನಯಾನ ಸಚಿವ

Pinterest LinkedIn Tumblr


ಹೊಸದಿಲ್ಲಿ: ಕೊರೊನಾ ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡಿದ್ದ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ಆಗಸ್ಟ್‌ ತಿಂಗಳಿಗೂ ಮುನ್ನ ಆರಂಭಿಸುವ ಸಾಧ್ಯತೆ ಇದೆ. ಈ ವಿಷಯವನ್ನು ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ತಿಳಿಸಿದ್ದಾರೆ.

ಆಗಸ್ಟ್‌ ಅಥವಾ ಸೆಪ್ಟೆಂಬರ್‌ ಒಳಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟವನ್ನು ಪುನಾರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಇದು ಕೊರೊನಾ ವೈರಸ್‌ ಸೋಂಕು ಹೆಚ್ಚಳ ಅಥವಾ ಕಡಿಮೆಯಾಗುವ ಪರಿಸ್ಥಿತಿಯ ಮೇಲೆ ಅವಲಂಬಿತವಾಗಿರುತ್ತದೆ ಎಂದು ಸಚಿವರು ತಿಳಿಸಿದರು.

ಎಂದಿನಿಂದ ವಿಮಾನ ಸಂಚಾರ ಆರಂಭವಾಗಲಿದೆ ಎಂಬುದನ್ನು ಈಗಲೇ ಹೇಳಲಾಗದು. ಪರಿಸ್ಥಿತಿ ಆಧರಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹರ್‌ದೀಪ್‌ ಸಿಂಗ್‌ ಪುರಿ ವಿವರಿಸಿದರು.

ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟುವುದಕ್ಕಾಗಿ ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಲಾಗಿದ್ದು, ಕಳೆದ ಎರಡು ತಿಂಗಳಿನಿಂದ ವಿಮಾನ ಸಂಚಾರ ರದ್ದಾಗಿದೆ. ಮೇ 25ರಿಂದ ದೇಶೀಯ ವಿಮಾನ ಸಂಚಾರಕ್ಕೆ ಕೇಂದ್ರ ಸರಕಾರ ಅನುಮತಿ ನೀಡಿದೆ.

Comments are closed.