ರಾಷ್ಟ್ರೀಯ

ಲಡಾಖ್’ನಿಂದ ಭಾರತೀಯ ಯೋಧರನ್ನು ವಶಕ್ಕೆ ಪಡೆದುಕೊಂಡಿರುವ ಚೀನಾ

Pinterest LinkedIn Tumblr


ನವದೆಹಲಿ; ಲಡಾಖ್’ನಲ್ಲಿ ಭಾರತ ಮತ್ತು ಚೀನಾ ಯೋಧರ ಗುದ್ದಾಟ ತೀವ್ರಗೊಂಡಿದ್ದು, ಕಳೆದ ವಾರ ಕೆಲ ಭಾರತೀಯ ಯೋಧರನ್ನು ಚೀನಾ ಸೇನೆ ಹಲವು ಗಂಟೆಗಳ ಕಾಲ ತನ್ನ ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ ಘಟನೆ ಇದೀಗ ಬೆಳಕಿಗೆ ಬಂದಿದೆ.

ಲಡಾಖ್’ನ ಪ್ಯಾಂಗ್ಯಾಂಗ್ ಸರೋವರದ ಬಳಿ ಹವು ದಿನಗಳಿಂದ ಬೀಡು ಬಿಟ್ಟಿರುವ ಚೀನಾ ಸೇನೆ, ಕಳೆದ ಬುಧವಾರ ಭಾರತದ ಗಡಿಯೊಳಗೆ ನುಗ್ಗಿ ಭಾರತದ ನೆಲದಲ್ಲಿ ಓಡಾಟ ನಡೆಸಿದೆ. ಈ ವೇಳೆ ಭಾರತೀಯ ಯೋಧರು ಆಕ್ಷೇಪ ವ್ಯಕ್ತಪಡಿಸಿದಾಗ ಹೆಚ್ಚಿನ ಸಂಖ್ಯೆಯಲ್ಲಿದ್ದ ಚೀನಾ ಯೋಧರು ಭಾರತೀಯ ಯೋಧರನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ಬಳಿಕ ಮರಳಿಸಿದ್ದಾರೆ.

ಈ ವಿಚಾರ ಕೈಮೀರುವ ಹಂತಕ್ಕೆ ತಲುಪುತ್ತಲೇ ಉಭಯ ದೇಶಗಳ ಕಮಾಂಡರ್ ಗಳು ಮಾತುಕತೆ ನಡೆಸಿ, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಬಳಿಕ ಭಾರತೀಯ ಯೋಧರನ್ನು ಬಿಡುಗಡೆ ಮಾಡಲಾಯಿತು ಎಂದು ವರದಿಗಳು ತಿಳಿಸಿವೆ.

Comments are closed.