ರಾಷ್ಟ್ರೀಯ

ಬಿಜೆಪಿ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷ ! ಪ್ರಧಾನಿ ಮೋದಿ ಹೇಳಿದ್ದೇನು….?

Pinterest LinkedIn Tumblr

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದು ಶನಿವಾರಕ್ಕೆ ಒಂದು ವರ್ಷವಾಗಿದೆ. ಕೊರೋನಾ ಬಿಕ್ಕಟ್ಟು ಸಂದರ್ಭದಲ್ಲಿ ದೇಶವಾಸಿಗಳನ್ನು ಉದ್ದೇಶಿಸಿ ಮೋದಿ ಪತ್ರ ಬರೆದಿದ್ದಾರೆ.

ಸುದೀರ್ಘವಾಗಿ ಬರೆದ ಪತ್ರದಲ್ಲಿ ಪ್ರಧಾನಿ ಮೋದಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ವಲಸೆ ಕಾರ್ಮಿಕರು, ದೇಶದ ಜನರ ಆರ್ಥಿಕ ಸ್ಥಿತಿಗತಿ, ಸಣ್ಣ ವ್ಯಾಪಾರಿಗಳು, ಬೀದಿಬದಿ ವ್ಯಾಪಾರಿಗಳಿಗೆ ತೊಂದರೆಯಾಗಿದೆ. ಸರ್ಕಾರ ಈ ಸಂದರ್ಭದಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದಿದ್ದಾರೆ.

ಪತ್ರದಲ್ಲಿ ತಮ್ಮ ಸರ್ಕಾರ ಕೈಗೊಂಡ ಹಲವು ಪ್ರಮುಖ ನಿರ್ಧಾರಗಳು, ಆದೇಶಗಳು, ಸಂಸತ್ತಿನಲ್ಲಿ ಅನುಮೋದನೆಯಾದ ಕಾಯ್ದೆಗಳನ್ನು ಕೂಡ ಪ್ರಸ್ತಾಪಿಸಿದ್ದಾರೆ.

Comments are closed.