ಥಾಣೆ: ಕೊರೋನಾ ವೈರಸ್ ನಿಂದ ಮೃತಪಟ್ಟ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಕನಿಷ್ಠ 18 ಮಂದಿಗೆ ಕೊವಿಡ್019 ಪಾಸಿಟಿವ್ ದೃಢಪಟ್ಟಿದೆ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಹಾಸ್‌ನಗರ ಪಟ್ಟಣದಲ್ಲಿ ಕೊರೋನಾ ವೈರಸ್ ಸೋಂಕಿತ 40 ವರ್ಷದ ಮಹಿಳೆ ಮೃತಪಟ್ಟಿದ್ದು, ನಿಷೇಧಾಜ್ಞೆಯನ್ನು ಉಲ್ಲಂಘಿಸಿ 70ಕ್ಕೂ ಹೆಚ್ಚು ಜನ ಮಹಿಳೆಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದಾರೆ ಎಂದು ಉಲ್ಲಾಸ್ ನಗರಪಾಲಿಕೆ ವಕ್ತಾರರು ಹೇಳಿದ್ದಾರೆ.
ಮೃತದೇಹವನ್ನು ಓಪನ್ ಮಾಡದಂತೆ ನಿರ್ದಿಷ್ಟ ಸೂಚನೆಗಳನ್ನು ನೀಡಿಯೇ ಮಹಿಳೆಯ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು, ಆದರೆ ಅವರು ಮೇ 25 ರಂದು ಅಂತಿಮ ವಿಧಿಗಳನ್ನು ನಿರ್ವಹಿಸಲು ಸುತ್ತಿದ ದೇಹವನ್ನು ತೆರೆದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ 70 ಮಂದಿಯನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸಿದ್ದು, ಆ ಪೈಕಿ 18 ಮಂದಿಗೆ ಪಾಸಿಟಿವ್ ಬಂದಿದೆ ಎಂದು ಅವರು ಹೇಳಿದ್ದಾರೆ.
ಸಾಂಕ್ರಾಮಿಕ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮೃತ ಮಹಿಳೆಯ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Comments are closed.