ರಾಷ್ಟ್ರೀಯ

ದೇಶದಲ್ಲಿ ಇಂದು (ಶುಕ್ರವಾರ) 9,800 ಕೊರೋನಾ ಪ್ರಕರಣಗಳು ಪತ್ತೆ: 273 ಸಾವು

Pinterest LinkedIn Tumblr


ನವದೆಹಲಿ:ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಮೂರನೇ ಹಂತದ ಲಾಕ್ ಡೌನ್ ಮುಕ್ತಾಯವಾಗಿದ್ದು, ನಾಲ್ಕನೇ ಹಂತದಲ್ಲಿ ಹಲವು ಮಾರ್ಗಸೂಚಿಯೊಂದಿಗೆ ನಿರ್ಬಂಧ ಸಡಿಲಿಕೆ ಮಾಡಲಾಗಿತ್ತು. ಇದೀಗ ಕಳೆದ 24ಗಂಟೆಯಲ್ಲಿ ದೇಶದಲ್ಲಿ 9,851 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 273ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ಈವರೆಗೆ 2,26,770 ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, 1,09,462 ಮಂದಿ ಗುಣಮುಖರಾಗಿದ್ದಾರೆ. 6348 ಜನರು ಕೋವಿಡ್ 19 ವೈರಸ್ ಗೆ ಬಲಿಯಾಗಿದ್ದಾರೆ. ಅಲ್ಲದೇ ದೇಶದಲ್ಲಿ ಕೋವಿಡ್ 19 ವೈರಸ್ ನಿಂದ ಶೇ.48.27ರಷ್ಟು ಮಂದಿ ಗುಣಮುಖರಾಗುತ್ತಿದ್ದಾರೆ.

ಜಗತ್ತಿನಲ್ಲಿ ಅಮೆರಿಕ, ಬ್ರೆಜಿಲ್, ರಷ್ಯಾ, ಯುನೈಟೆಡ್ ಕಿಂಗ್ ಡಮ್, ಸ್ಪೇನ್ ಹಾಗೂ ಇಟಲಿ ನಂತರ ಅತೀ ಹೆಚ್ಚು ಕೋವಿಡ್ ಪ್ರಕರಣ ಹೊಂದಿರುವ 7ನೇ ದೇಶ ಭಾರತವಾಗಿದೆ.

ಕೋವಿಡ್ 19 ವೈರಸ್ ಗೆ ಸಂಬಂಧಿಸಿದಂತೆ ಸಂಭವಿಸುವ ಸಾವಿನ ಅಂಕಿಅಂಶದಲ್ಲಿ ಭಾರತ 12ನೇ ಸ್ಥಾನದಲ್ಲಿದೆ. ರಾಷ್ಟ್ರರಾಜಧಾನಿ ಸೇರಿದಂತೆ ದೇಶದಲ್ಲಿ ಕಡಿಮೆ ಪ್ರಮಾಣದಲ್ಲಿ ಪರೀಕ್ಷೆ ನಡೆಯುತ್ತಿರುವುದರಿಂದ ಅತೀ ಹೆಚ್ಚು ಪಾಸಿಟಿವ್ ಪ್ರಕರಣ ಜಾಸ್ತಿಯಾಗಲು ಕಾರಣವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

Comments are closed.