ರಾಷ್ಟ್ರೀಯ

ದೇಶದಲ್ಲಿ ಕೊರೋನಾ ಆರ್ಭಟ; ಒಂದೇ ದಿನ 9,987 ಮಂದಿಯಲ್ಲಿ ವೈರಸ್: ಸೋಂಕಿತರ ಸಂಖ್ಯೆ 2,66,598ಲಕ್ಷಕ್ಕೆ ಏರಿಕೆ

Pinterest LinkedIn Tumblr

ನವದೆಹಲಿ: ದೇಶದಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ 9,987 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿದೆ ದೇಶದಲ್ಲಿ ಸೋಂಕಿತರ ಸಂಖ್ಯೆ 2,66,598ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಅದರ ಬೆನ್ನಲ್ಲೇ ಕಳೆದ 24 ಗಂಟೆಗಳಲ್ಲಿ 331 ಮಂದಿ ಮಹಾಮಾರಿ ವೈರಸ್’ಗೆ ಬಲಿಯಾಗಿದ್ದು, ಮೃತರ ಸಂಖ್ಯೆ ಕೂಡ 7466ಕ್ಕೆ ತಲುಪಿದೆ.

ಈ ನಡುವೆ 266598 ಮಂದಿ ಸೋಂಕಿತರ ಪೈಕಿ 129215 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ ದೇಶದಲ್ಲಿ 129917 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.

ಮತ್ತೊಂದೆಡೆ ದೇಶದಲ್ಲಿಯೇ ಅತ್ಯಂತ ಹೆಚ್ಚು ಕೊರೋನಾ ಪ್ರಕರಣ ದಾಖಲಾಗಿರುವ ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ನಿನ್ನೆ ಒಂದೇ ದಿನ 1311 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಮಹಾನಗರದಲ್ಲಿ ಸೋಂಕಿತರ ಸಂಖ್ಯೆ 50085ಕ್ಕೆ ತಲುಪಿದೆ. ಜೊತೆಗೆ ಈವರೆಗೆ ನಗರದಲ್ಲಿ 1702 ಜನರು ಸಾವನ್ನಪ್ಪಿದ್ದಾರೆ.

Comments are closed.