ರಾಷ್ಟ್ರೀಯ

ದಿಲ್ಲಿಯಲ್ಲಿ ಜುಲೈ ಅಂತ್ಯಕ್ಕೆ ಕೊರೋನಾ ಸಂಖ್ಯೆ 5.5 ಲಕ್ಷಕ್ಕೆ ಏರಿಕೆ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ

Pinterest LinkedIn Tumblr


ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅಪಾಯಕಾರಿ ಸಮುದಾಯಕ್ಕೆ ಹರಡುವ ಹಂತ ತಲುಪುವ ಆತಂಕ ಎದುರಾಗಿದೆ. ಆದರೆ ಕೇಂದ್ರ ಸರ್ಕಾರ ಇದೇ ದೃಷ್ಟಿಕೋನವನ್ನು ಹೊಂದಿಲ್ಲ ಎಂದು ದೆಹಲಿ ಆಮ್ ಆದ್ಮಿ ಸರ್ಕಾರ ಮಂಗಳವಾರ ಹೇಳಿದೆ.

ದೆಹಲಿಯಲ್ಲಿ ಸದ್ಯ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನಿಸಿದೆ, ಜುಲೈ ಮಧ್ಯದ ವೇಳೆಗೆ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಸುಮಾರು 2.25 ಲಕ್ಷಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ. ಕೊರೋನಾ ಅತಿ ಹೆಚ್ಚು ಪೀಡಿತ ದೇಶದ ನಗರಗಳಲ್ಲಿ ದೆಹಲಿಯೂ ಒಂದಾಗಬಹುದು ಮತ್ತು ಮುಂದಿನ ತಿಂಗಳ ಅಂತ್ಯದ ವೇಳೆಗೆ ಪ್ರಕರಣಗಳ ಸಂಖ್ಯೆ 5.5 ಲಕ್ಷ ತಲುಪುವ ಸಾಧ್ಯತೆ ಇದೆ. ಹಾಗ ಸುಮಾರು 80,000 ಬೆಡ್ ಗಳು ಬೇಕಾಗುತ್ತದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಹೇಳಿದ್ದಾರೆ.

ವರದಿಗಳ ಪ್ರಕಾರ, ಜೂನ್ ಅಂತ್ಯಕ್ಕೆ ದೆಹಲಿಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕೆ ಏರಿಕೆಯಾಗಲಿದೆ. ಹಾಗ ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ 15 ಸಾವಿರ ಬೆಡ್ ಗಳು ಬೇಕಾಗುತ್ತದೆ.

ದೆಹಲಿಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ ಎಂದು ನಾವು ಹೇಳಿದ್ದೇವೆ. ಆದರೆ ಸಭೆಯಲ್ಲಿ ಕೇಂದ್ರದ ಅಧಿಕಾರಿಗಳು ಇಲ್ಲ ಎನ್ನುತ್ತಿದ್ದಾರೆ. ಹೀಗಾಗಿಯೇ ಆಸ್ಪತ್ರೆಯ ಬೆಡ್ ಗಳನ್ನು ದೆಹಲಿ ನಿವಾಸಿಗಳಿಗೆ ಮೀಸಲಿಡಲು ಸಂಪುಟ ಸಭೆ ನಿರ್ಧರಿಸಿತ್ತು. ಈ ನಿರ್ಧಾರವನ್ನು ತಿರಸ್ಕರಿಸಿರುವ ಲೆಫ್ಟಿನೆಂಟ್ ಗವರ್ನರ್ ಅವರಿಗೆ ತಮ್ಮ ನಿರ್ಧಾರ ಮರು ಪರಿಶೀಲಿಸುವಂತೆ ಕೇಳಿಕೊಂಡಿದ್ದೇವೆ ಎಂದರು.

Comments are closed.