ರಾಷ್ಟ್ರೀಯ

ದಿಲ್ಲಿಯಲ್ಲಿ ಸತತ 2ನೇ ದಿನವೂ 2 ಸಾವಿರಕ್ಕೂ ಅಧಿಕ ಹೊಸ ಕೊರೋನಾ ಸೋಂಕು ಪ್ರಕರಣಗಳು

Pinterest LinkedIn Tumblr


ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಮತ್ತೆ 2 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಆ ಮೂಲಕ ಸತತ 2ನೇ ದಿನವೂ ದೆಹಲಿಯಲ್ಲಿ 2 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಆ ಮೂಲಕ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 38, 958ಕ್ಕೆ ಏರಿಕೆಯಾಗಿದೆ. ಈ ಪೈಕಿ ನಿನ್ನೆ ಒಂದೇ ದಿನ 1547 ಸೋಂಕಿತರು ಗುಣಮುಖರಾಗಿದ್ದು, ಒಟ್ಟಾರೆ ದೆಹಲಿಯಲ್ಲಿ ಈ ವರೆಗೂ 14 945 ಸೋಂಕಿತರು ಗುಣಮುಖರಾಗಿದ್ದಾರೆ. 22742 ಸಕ್ರಿಯ ಪ್ರಕರಣಗಳಿವೆ.

ಅಂತೆಯೇ ನಿನ್ನೆ 57 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೆ 1271 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

Comments are closed.