ರಾಷ್ಟ್ರೀಯ

ತೀವ್ರ ಜ್ವರ-ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದ ದೆಹಲಿ ಆರೋಗ್ಯ ಸಚಿವ: ಇಂದು ಕೊರೋನಾ ಪರೀಕ್ಷೆ

Pinterest LinkedIn Tumblr

ನವದೆಹಲಿ: ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆಯಿಂದ ದೆಹಲಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಕಳೆದ ರಾತ್ರಿ ದೆಹಲಿಯ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಇಂದು ಕೊರೋನಾ ಪರೀಕ್ಷೆ ನಡೆಸಲಾಗುತ್ತದೆ.

ಇಂದು ಬೆಳಗ್ಗೆ ಟ್ವೀಟ್ ಮಾಡಿರುವ 55 ವರ್ಷದ ಸತ್ಯೇಂದ್ರ ಜೈನ್, ತೀವ್ರ ಜ್ವರ ಮತ್ತು ಹಠಾತ್ತನೆ ಆಕ್ಸಿಜನ್ ಪೂರೈಕೆ ಕಡಿಮೆಯಾಗಿದ್ದರಿಂದ ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾದೆ. ಮುಂದಿನ ಆರೋಗ್ಯ ಸ್ಥಿತಿಗತಿ ಬಗ್ಗೆ ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ, ನೀವು ಎಡೆಬಿಡದೆ ಹಗಲಿರುಳು ಕೆಲಸ ಮಾಡುತ್ತಿದ್ದಿರಿ, ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಲಿಲ್ಲ. ಇನ್ನಾದರೂ ನಿಮ್ಮ ಆರೋಗ್ಯದ ಕಡೆ ಗಮನ ಹರಿಸಿ ಬೇಗನೆ ಗುಣಮುಖರಾಗಿ ಎಂದು ಹಾರೈಸಿದ್ದಾರೆ.

Comments are closed.