ರಾಷ್ಟ್ರೀಯ

ಭಾರತದಲ್ಲಿ ಕೊರೋನಾ ಅಟ್ಟಹಾಸಕ್ಕೆ ಒಂದೇ ದಿನ 10,974 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆ

Pinterest LinkedIn Tumblr

ನವದೆಹಲಿ: ಭಾರತದಲ್ಲಿ ಕೊರೋನಾ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಒಂದೇ ದಿನ 10,974 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3.54 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುುಟಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ಲಾಕ್’ಡೌನ್ ತೆರವು ಬಳಿಕ ತನ್ನ ಆರ್ಭಟವನ್ನು ಮತ್ತಷ್ಟು ಹೆಚ್ಚು ಮಾಡಿರುವ ಕೊರೋನಾ, ಕಳೆದ 24 ಗಂಟೆಗಳಲ್ಲಿ 2003 ಮಂದಿ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಖ್ಯೆ 11903ಕ್ಕೆ ಏರಿಕೆಯಾಗಿದೆ. ಸಾವಿಗೀಡಾದವರಲ್ಲಿ ಶೇ.70ರಷ್ಟು ಮಂದಿ ಈಗಾಗಲೇ ಬೇರೆ ಬೇರೆ ರೀತಿಯ ಕಾಯಿಲೆಯಿಂದ ಬಳಲುತ್ತಿರುವವರಾಗಿದ್ದರು ಎಂದು ಸಚಿವಾಲಯ ತಿಳಿಸಿದೆ.

ಇದೇ ವೇಳೆ ಬುಧವಾರ 10,974 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 3,54,065ಕ್ಕೆ ಏರಿಕೆಯಾಗಿದೆ. ಸಮಾಧಾನಕರ ಸಂಗತಿಯೆಂದರೆ, ದೇಶದಲ್ಲಿ ಸೋಂಕಿತರ ಜೊತೆಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. 3,54,065 ಮಂದಿ ಸೋಂಕರಿತರ ಪೈಕಿ 1,86,935 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಪ್ರಸ್ತುತ ದೇಶದಲ್ಲಿನ್ನೂ 1,55,227 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.

Comments are closed.