ನವದೆಹಲಿ (ಜೂ. 17): ಮುಸ್ಲಿಮರ ಪವಿತ್ರ ಧಾರ್ಮಿಕ ಯಾತ್ರಾ ಸ್ಥಳವಾದ ಹಜ್ ಯಾತ್ರೆಗೆ ಪ್ರತಿ ವರ್ಷ ಲಕ್ಷಾಂತರ ಮುಸ್ಲಿಮರು ತೆರಳುತ್ತಾರೆ. ಸೌದಿ ಅರೇಬಿಯಾದಲ್ಲಿರುವ ಮೆಕ್ಕಾದಲ್ಲಿ 5 ದಿನಗಳ ಕಾಲ ನಡೆಯುವ ಈ ಯಾತ್ರೆ ಇತಿಹಾಸದಲ್ಲೇ ಮೊದಲ ಬಾರಿಗೆ ಈ ವರ್ಷ ರದ್ದಾಗುವ ಸಾಧ್ಯತೆ ಹೆಚ್ಚಾಗಿದೆ. ಕೊರೋನಾ ಮಹಾಮಾರಿಯಿಂದ ಒಂದೇ ಕಡೆ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ. ಸೌದಿ ಅರೇಬಿಯಾದಲ್ಲಿ ಕೂಡ ದಿನದಿಂದ ದಿನಕ್ಕೆ ಕೊರೋನಾ ಅಟ್ಟಹಾಸ ಹೆಚ್ಚುತ್ತಿರುವುದರಿಂದ ಹಜ್ ಯಾತ್ರೆಯನ್ನು ರದ್ದುಗೊಳಿಸುವ ಸಾಧ್ಯತೆಯಿದೆ.
ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಪ್ರತಿವರ್ಷ ನಡೆಯುವ ಹಜ್ ಯಾತ್ರೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಜಗತ್ತಿನ ಎಲ್ಲ ದೇಶಗಳ ಮುಸ್ಲಿಮರೂ ಮೆಕ್ಕಾಗೆ ತೆರಳುತ್ತಾರೆ. ಜೀವನದಲ್ಲಿ ಒಮ್ಮೆಯಾದರೂ ಹಜ್ ಯಾತ್ರೆಗೆ ತೆರಳಬೇಕೆಂಬುದು ಎಲ್ಲ ಮುಸ್ಲಿಮರ ಕನಸು. 1932ರಿಂದ ಪ್ರತಿವರ್ಷ ಹಜ್ ಯಾತ್ರೆ ನಡೆಸಲಾಗುತ್ತಿದೆ. ಈ ಯಾತ್ರೆಯಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳುವುದರಿಂದ ಈ ವರ್ಷ ಮೊದಲ ಬಾರಿಗೆ ಹಜ್ ಯಾತ್ರೆಯನ್ನು ರದ್ದುಗೊಳಿಸುವ ಸಾಧ್ಯತೆಯಿದೆ.
Comments are closed.