ರಾಷ್ಟ್ರೀಯ

ದೇಶದಲ್ಲಿ ಒಂದೇ ದಿನ ಕೊರೊನಾಗೆ 2,000ಕ್ಕೂ ಹೆಚ್ಚು ಮಂದಿ ಸಾವು

Pinterest LinkedIn Tumblr


ದೇಶದಲ್ಲಿ ಬುಧವಾರ ಒಂದೇ ದಿನ 2,003 ಜನ ಕೊರೊನಾ ಮಹಾಮಾರಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಂದೇ ದಿನದಲ್ಲಿ ಕೊರೊನಾ ಸೋಂಕಿಗೆ ಸಾವಿಗೀಡಾದವರ ಪ್ರಮಾಣದಲ್ಲಿ ಏರಿಕೆಯಾಗಿದೆ.

ದೇಶದಲ್ಲಿ ಒಟ್ಟು ಕೊರೊನಾ ವೈರಸ್ ಪ್ರಕರಣಗಳು 354,161 ಕ್ಕೆ ತಲುಪಿದ್ದು, ಸುಮಾರು 11,921 ಮಂದಿ ಈ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ದಿನೇ ದಿನೇ ಹೆಚ್ಚಾಗುತ್ತಿರುವ ಕೊರೊನಾ ಮಹಾಮಾರಿಯನ್ನು ತಡೆಗಟ್ಟುವ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಜೂ.17 ರಂದು 15 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಗುಜರಾತ್‌ ನಲ್ಲಿ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ಕಂಡುಬರುತ್ತಿದ್ದು, ಈ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಪ್ರಧಾನಿ ಮಾತುಕತೆ ನಡೆಸಲಿದ್ದಾರೆ.

ಮಹಾರಾಷ್ಟ್ರ ಮತ್ತು ಅದರ ರಾಜಧಾನಿ ಮುಂಬೈನಾದ್ಯಂತ ಸಾವುನೋವುಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗಿದೆ. ಮುಂಬೈನಲ್ಲಿ ಈಗ 3,167 ಕೊರೊನಾ ವೈರಸ್ ಸಂಬಂಧಿತ ಸಾವುಗಳು ಸಂಭವಿಸಿವೆ ಎಂದು ದಾಖಲೆಗಳು ತೋರಿಸುತ್ತವೆ. ಮಂಗಳವಾರ ಸಂಭವಿಸಿದ 81 ಸಾವುಗಳು ಸೇರಿದಂತೆ ರಾಜ್ಯವ್ಯಾಪಿ ಸಾವಿನ ಸಂಖ್ಯೆ 5,537 ಕ್ಕೆ ತಲುಪಿದೆ.

ಕರ್ನಾಟಕದಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 7,530ಕ್ಕೆ ಏರಿಕೆಯಾಗಿದೆ. 94ಮಂದಿಯ ಸಾವಾಗಿದ್ದು, 4,456ಮಂದಿ ಗುಣಮುಖರಾಗಿದ್ದಾರೆ. ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ರಾಜ್ಯ 10ನೇ ಸ್ಥಾನದಲ್ಲಿದೆ.

ಜಾಗತಿಕವಾಗಿ ಕೊರೊನಾವೈರಸ್ ಪ್ರಕರಣಗಳು 8,257,885 ಮತ್ತು 445,986 ಜನರು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ.

2,208,400 ಪ್ರಕರಣಗಳೊಂದಿಗೆ ಅಮೇರಿಕಾ ಕೊರೊನಾ ವೈರಸ್ ನಿಂದ ಅತಿ ಹೆಚ್ಚು ಹಾನಿಗೊಳಗಾದ ದೇಶವಾಗಿದೆ. ಬ್ರೆಜಿಲ್ ನಂತರದ ಸ್ಥಾನದಲ್ಲಿದೆ (928,834 ಪ್ರಕರಣಗಳು). ರಷ್ಯಾ (545,458), ಭಾರತ (354,161), ಯುನೈಟೆಡ್ ಕಿಂಗ್‌ಡಮ್ (296,857) ಮತ್ತು ಸ್ಪೇನ್ (291,189).

Comments are closed.