ರಾಷ್ಟ್ರೀಯ

ಕೊರೋನಾಗೆ ತಮಿಳುನಾಡು ಮುಖ್ಯಮಂತ್ರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಬಲಿ

Pinterest LinkedIn Tumblr


ಚೆನ್ನೈ: ತಮಿಳುನಾಡು ರಾಜ್ಯ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿಯವರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಮಹಾಮಾರಿ ಕೊರೋನಾವೈರಸ್’ಗೆ ಬಲಿಯಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ.

ಕೊರೋನಾಗೆ ಬಲಿಯಾಗಿರುವ ವ್ಯಕ್ತಿ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಹಿರಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಜ್ವರ, ಶೀತ ಸೇರಿದಂತೆ ಕೊರೋನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ವ್ಯಕ್ತಿ ಕೆಲ ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿತ್ತು. ಮೊದಲು ಒಮಂದೂರರ್ ಎಸ್ಟೇಟ್ ನಲ್ಲಿರುವ ಸರ್ಕಾರಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿತ್ತು. ನಂತರ ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಬಳಿಕ ಅಲ್ಲಿಂದ ಮತ್ತೊಂದು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮತ್ತೆ ಅಲ್ಲಿಂದ ರಾಜೀವ್ ಗಾಂಧಿ ಆಸ್ಪತ್ರೆಗೆ ಕರೆತರಲಾಗಿದ್ದು, ಈ ವೇಳೆ ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆಂದು ಹೇಳಲಾಗುತ್ತಿದೆ.

ಲಾಕ್’ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಸೋಂಕು ಅತ್ಯಂತ ಶೀಘ್ರಗತಿಯಲ್ಲಿ ಹರಡುತ್ತಿದೆ. ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ಇತರೆ ಅಧಿಕಾರಿಗಳು ಸೇರಿದಂತೆ ಒಟ್ಟು 200ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

Comments are closed.