ರಾಷ್ಟ್ರೀಯ

ಆಂಧ್ರ ಸರ್ಕಾರದಿಂದ SSLC ಪರೀಕ್ಷೆ ರದ್ದುಗೊಳಿಸಿ ಆದೇಶ

Pinterest LinkedIn Tumblr


ಆಂಧ್ರಪ್ರದೇಶ (ಜೂನ್‌ 20); ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕೊರೋನಾ ಭಯದಿಂದಾಗಿಯೇ ಕಳೆದ ಮಾರ್ಚ್‌‌ನಲ್ಲೇ ನಡೆಯಬೇಕಿದ್ದ 10ನೇ ತರಗತಿ ಪರೀಕ್ಷೆಯನ್ನು ಎಲ್ಲಾ ರಾಜ್ಯಗಳು ತಾತ್ಕಾಲಿಕವಾಗಿ ಮುಂದೂಡಿದ್ದವು. ಆದರೆ, ಪ್ರಸ್ತುತ ಆಂಧ್ರಪ್ರದೇಶದ ಜಗನ್‌ಮೋಹನ್‌ ರೆಡ್ಡಿ ಸರ್ಕಾರ 10ನೇ ತರಗತಿ ಪರೀಕ್ಷೆಯನ್ನೇ ರದ್ದುಗೊಳಿಸಿ ಆದೇಶಿಸಿದೆ. ಕಳೆದ ವಾರ ತಮಿಳುನಾಡು ಸರ್ಕಾರ ಸಹ 10ನೇ ತರಗತಿ ಪರೀಕ್ಷೆಯನ್ನು ರದ್ದುಮಾಡಿ ಆದೇಶಿಸಿತ್ತು.

ಇಂದು ಈ ಕುರಿತು ಸ್ಪಷ್ಟೀಕರಣ ನೀಡಿರುವ ಆಂಧ್ರಪ್ರದೇಶದ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್, “ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೋನಾ ಸೋಂಕು ಈವರೆಗೆ ತಹಬಂದಿದೆ ಬಂದಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ SSLC ಪರೀಕ್ಷೆಯನ್ನೇ ರದ್ದು ಮಾಡಿದ್ದು ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಈವರೆಗೆ ಒಟ್ಟು 7961 ಕೊರೋನಾಪ್ರಕರಣಗಳು ದಾಖಲಿಸಿದ್ದು, 96 ಜನ ಮೃತಪಟ್ಟಿದ್ದಾರೆ. 3,948 ಜನ ಇನ್ನು ಚಿಕಿತ್ಸೆ ಪಡೆಯುತ್ತಿದ್ದು, ಇಂದು ಒಂದೇ ದಿನ 443 ಪ್ರಕರಣಗಳು ವರದಿಯಾಗಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ.ದಕ್ಷಿಣದ ರಾಜ್ಯಗಳ ಪೈಕಿ ಕೇರಳ ಸರ್ಕಾರ ಮಾತ್ರ 3 ವಿಷಯದ SSLC ಪರೀಕ್ಷೆಯನ್ನು ಮೇ ಅಂತ್ಯದಲ್ಲಿ ಯಶಸ್ವಿಯಾಗಿ ನಡೆಸಿದೆ. ತೆಲಂಗಾಣ, ತಮಿಳುನಾಡು ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ಮುಂಬಡ್ತಿ ನೀಡಿದೆ.

Comments are closed.