ರಾಷ್ಟ್ರೀಯ

ದೇಶದಲ್ಲಿ ಇಂದು (ರವಿವಾರ) 15,400 ಕೊರೋನಾ ಪ್ರಕರಣಗಳು ಪತ್ತೆ:​, 4.10 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

Pinterest LinkedIn Tumblr


ನವದೆಹಲಿ(ಜೂ.21): ಕೊರೋನಾ ಸೋಂಕು ಹರಡುವಿಕೆ ಬಹಳ‌ ಕಡಿಮೆ ಇದ್ದಾಗ ಲಾಕ್​ಡೌನ್ ಜಾರಿ ಮಾಡಲಾಗಿತ್ತು. ಆದರೀಗ, ಸೋಂಕು ಹರಡುವಿಕೆ ಹೆಚ್ಚಾದಾಗ ನಾಮಕಾವಸ್ತೆಗೆ ಮಾತ್ರ ಲಾಕ್​ಡೌನ್ ಜಾರಿಗೊಳಿಸಿದ ಪರಿಣಾಮ ಭಾರತದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದೆ. ಕಳೆದ ವಾರವಷ್ಟೇ ಮೂರು ಲಕ್ಷ ದಾಟಿದ್ದ ದೇಶದ ಕೊರೊನಾ ಸೋಂಕು‌ ಪೀಡಿತರ ಸಂಖ್ಯೆ ಈಗ ನಾಲ್ಕು ‌ಲಕ್ಷದ ಗಡಿ ದಾಟಿದೆ.

ಭಾರತದಲ್ಲಿ ಮೇ 30ರಿಂದ ಪ್ರತಿನಿತ್ಯ 8 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು, ಜೂನ್‌ 3ರಿಂದ ದಿನವೊಂದರಲ್ಲಿ 9 ಸಾವಿರಕ್ಕೂ ಅಧಿಕ ಪ್ರಕರಣಗಳು, ಜೂನ್ 11ರಿಂದ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 12ತಾರೀಖಿನಿಂದ 11 ಸಾವಿರಕ್ಕೂ ಹೆಚ್ಚು‌ ಪ್ರಕರಣಗಳು, ಜೂನ್ 17ರಿಂದ 12 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 18ರಿಂದ 13 ಸಾವಿರಕ್ಕೂ‌ ಹೆಚ್ಚು‌ ಪ್ರಕರಣಗಳು ವರದಿಯಾಗುತ್ತಿದ್ದವು. ಈಗ ಪ್ರತಿದಿನ 14 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಲು ಆರಂಭಿಸಿವೆ. ಶನಿವಾರ 15,400 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದ ಕೊರೊನಾ ಪೀಡಿತರ ಸಂಖ್ಯೆ 4,10,461ಕ್ಕೆ ಏರಿಕೆಯಾಗಿದೆ.

ಇದುವರೆಗೂ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 13,254ಕ್ಕೆ ಏರಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 2,27,755 ಜನ ಮಾತ್ರ. ದೇಶದಲ್ಲಿ ಇನ್ನೂ 1,82,706 ಜನರಲ್ಲಿ ಕೊರೊನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಮೇ 10ರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಪ್ರತಿನಿತ್ಯ ನಾಲ್ಕು ಸಾವಿರಕ್ಕಿಂತ ಹೆಚ್ಚಾಗುತ್ತಲೇ ಇದೆ.‌ ಮೇ 10ರಂದು 4,213 ಜನರಿಗೆ, ಮೇ 11ರಂದು 3,064 ಮಂದಿಗೆ, ಮೇ 12 ರಂದು 3,525 ಜನರಿಗೆ, ಮೇ13ರಂದು 3,722 ಮಂದಿಗೆ ಹಾಗೂ ಮೇ 14ರಂದು 3,967 ಜನರಿಗೆ, ಮೇ 15ರಂದು 3,970 ಮಂದಿಗೆ, ಮೇ 16ರಂದು 4,987 ಜನರಿಗೆ, ಮೇ 17ರಂದು 5,242, ಮೇ 18ರಂದು 4,970, ಮೇ 19ರಂದು 5,611, ಮೇ 20ರಂದು 5,609, ಮೇ 21ರಂದು 6,088, ಮೇ 22ರಂದು 6,654, ಮೇ 23ರಂದು 6,767, ಮೇ 24ರಂದು 6,977, ಮೇ 25ರಂದು 6,535, ಮೇ 26ರಂದು 6,387, ಮೇ 27ರಂದು 6,566, ಮೇ 28ರಂದು 7,466, ಮೇ 29ರಂದು 7,964, ಮೇ 30ರಂದು 8,380, ಮೇ 31ರಂದು 8,392, ಜೂನ್ 1ರಂದು 8,171, ಜೂನ್ 2ರಂದು 8,909, ಜೂನ್ 3ರಂದು 9,304, ಜೂನ್ 4ರಂದು 9,851, ಜೂನ್ 5ರಂದು 9,887, ಜೂನ್ 6ರಂದು 9,971, ಜೂ 7ರಂದು 9,983, ಜೂನ್ 8ರಂದು 9987, ಜೂನ್‌ 9ರಂದು 9,985, ಜೂನ್ 10ರಂದು 9,996, ಜೂನ್ 11ರಂದು 10,956, ಜೂನ್ 12ರಂದು‌ 11,458, ಜೂನ್ 13ರಂದು 11,929, ಜೂನ್ 14ರಂದು 11,502, ಜೂನ್ 15ರಂದು 10,667, ಜೂನ್ 16ರಂದು 10,974, ಜೂನ್ 17ರಂದು 12,881, ಜೂನ್‌ 18ರಂದು 13,586 ಹಾಗೂ ಜೂನ್ 19ರಂದು 14,516, ಜೂನ್​​​ 20ರಂದು 15,400 ಪ್ರಕರಣಗಳು ಕಂಡುಬಂದಿವೆ.

Comments are closed.