ರಾಷ್ಟ್ರೀಯ

ದೆಹಲಿಯಲ್ಲಿ 24 ಗಂಟೆಯಲ್ಲಿ 3,788 ಕೊರೋನಾ ಪ್ರಕರಣಗಳು ಪತ್ತೆ

Pinterest LinkedIn Tumblr


ನವದೆಹಲಿ(ಜೂ.24): ಜಗತ್ತಿನ ಜಂಘಾಬಲವನ್ನೇ ಅಡಗಿಸಿರುವ ಕೊರೋನಾ ಮಹಾಮಾರಿ ರಾಷ್ಟ್ರ ರಾಜಧಾನಿ ದೆಹಲಿಯನ್ನೂ ದಿಗಿಲುಗೀಡುಮಾಡಿದೆ. ದೆಹಲಿಯಲ್ಲಿ ಬುಧವಾರ ಒಂದೇ ದಿನದಲ್ಲಿ 3,788 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ ಎಂದು ದೆಹಲಿ ಸರ್ಕಾರದ ಹೆಲ್ತ್​​​ ಬುಲೆಟಿನ್​​ ತಿಳಿಸಿದೆ‌.

ಪ್ರತಿದಿನ ಸಂಜೆ ಕಳೆದ 24 ಗಂಟೆಯಲ್ಲಿ ಹೊಸದಾಗಿ ಕಂಡು ಬರುವ ಕೊರೋನಾ ಪ್ರಕರಣಗಳನ್ನು ದೆಹಲಿ ಸರ್ಕಾರ ಬಿಡುಗಡೆ ಮಾಡುತ್ತಿದೆ‌. ಅದೇ ರೀತಿ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಹೊಸದಾಗಿ 3,788 ಕೊರೋನಾ ಪಾಸಿಟಿವ್​​ ಕೇಸುಗಳು ಪತ್ತೆಯಾಗಿವೆ. ಇದರಿಂದ ದೆಹಲಿಯ ಕೊರೊನಾ ಪೀಡಿತರ ಸಂಖ್ಯೆ 7 ಲಕ್ಷ ದಾಟಿದೆ. ಸದ್ಯ ದೆಹಲಿಯ ಕೊರೊನಾ ಸೋಂಕು ಪೀಡಿತರ ಸಂಖ್ಯೆ 70,390ಕ್ಕೆ ಏರಿಕೆಯಾಗಿದೆ.

ಇದಲ್ಲದೆ ಮಹಾಮಾರಿ ಕೊರೋನಾ ಸೋಂಕಿಗೆ ಬುಧವಾರ 64 ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ದೆಹಲಿಯಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 2,365ಕ್ಕೆ ಏರಿಕೆಯಾಗಿದೆ.

ಕಳೆದ 5 ದಿನಗಳಿಂದ ದೆಹಲಿಯಲ್ಲಿ 3 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕಿತ ಪ್ರಕರಣಗಳು ಕಂಡುಬರುತ್ತಿವೆ. ದೆಹಲಿಯಲ್ಲಿ ಕೊರೋನಾ ಸೋಂಕು ಹರಡುವಿಕೆ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮತ್ತು ಮುಖ್ಯಮಂತ್ರಿ ಅರವಿಂದ್​​​​ ಕೇಜ್ರಿವಾಲ್​​ 3ನೇ ಬಾರಿಗೆ ವರ್ಚುವಲ್​​​ ಸಭೆ ಮಾಡಿದ್ದಾರೆ. ಕೊರೋನಾ ಪರೀಕ್ಷೆಯನ್ನೂ ಹೆಚ್ಚಿಸಲಾಗಿದೆ.

ಈ ಮಧ್ಯೆ ಇತ್ತೀಚೆಗಷ್ಟೇ ಕೊರೋನಾ ಸೋಂಕಿಗೆ ತುತ್ತಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​​​ ಪ್ಲಾಸ್ಮಾ ಸದ್ಯ ಚೇತರಿಸಿಕೊಂಡಿದ್ದಾರೆ‌.

Comments are closed.