ಚೆನ್ನೈ: ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಗುರುವಾರ ಮತ್ತೆ ಇಬ್ಬರು ಎಐಎಡಿಎಂಕೆ ಶಾಸಕರಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಶಾಸಕರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಪರಮಕುಡಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಎನ್ ಸಾಥನ್ ಪ್ರಭಾಕರ್ ಮತ್ತು ಉಲುಂದರ್‌ಪೇಟೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಆರ್ ಕುಮಾರಗುರು ಅವರಿಗೆ ಇಂದು ಕೊರೋನಾ ಪಾಸಿಟಿವ್ ಬಂದಿದೆ.
ಕೊರೋನಾ ಸೋಂಕಿತ ಇಬ್ಬರು ಶಾಸಕರೊಂದಿಗೆ ಮಾತನಾಡಿದ್ದು, ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿರುವುದಾಗಿ ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
ಇದಕ್ಕು ಮುನ್ನ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆಪಿ ಅನ್ಬಗಳನ್ ಮತ್ತು ಶ್ರೀಪೆರಂಬುದುರ್ ಶಾಸಕ ಕೆ ಪಳನಿ ಅವರಿಗೆ ಕೊವಿಡ್-19 ಪಾಸಿಟಿವ್ ಬಂದಿದ್ದು, ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.
Comments are closed.