ರಾಷ್ಟ್ರೀಯ

ಕಾನ್ಪುರ; ರೌಡಿ ಶೀಟರ್ ವಿಕಾಸ್ ದುಬೆಯನ್ನು ಬಂಧಿಸಲು ಹೋದ ವೇಳೆ ಎನ್ ಕೌಂಟರ್ ನಲ್ಲಿ ಇಬ್ಬರು ಕ್ರಿಮಿನಲ್ ಗಳ ಹತ್ಯೆ

Pinterest LinkedIn Tumblr

ಕಾನ್ಪುರ(ಉತ್ತರ ಪ್ರದೇಶ): ರೌಡಿ ಶೀಟರ್ ವಿಕಾಸ್ ದುಬೆಯನ್ನು ಬಂಧಿಸಲು ಹೋಗಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಕ್ರಿಮಿನಲ್ ಗಳನ್ನು ಹತ್ಯೆಗೈಯಲಾಗಿದೆ ಎಂದು ಕಾನ್ಪುರ ಪೊಲೀಸ್ ಮಹಾ ನಿರ್ದೇಶಕ ಮೊಹಿತ್ ಅಗರ್ವಾಲ್ ತಿಳಿಸಿದ್ದಾರೆ.

ಇಂದು ಮಧ್ಯರಾತ್ರಿ ನಡೆದ ಎನ್ ಕೌಂಟರ್ ನಲ್ಲಿ 8 ಮಂದಿ ಪೊಲೀಸರು ಹುತಾತ್ಮರಾದ ಘಟನೆ ಬಗ್ಗೆ ಮಾಹಿತಿ ನೀಡಿದ ಅವರು, ಇಬ್ಬರು ಕ್ರಿಮಿನಲ್ ಗಳನ್ನು ಹತ್ಯೆ ಮಾಡಲಾಗಿದೆ. ಆ ವೇಳೆ ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ. ಎನ್ ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಗರ್ವಾಲ್ ತಿಳಿಸಿದ್ದಾರೆ.

ಘಟನೆ ಬಗ್ಗೆ ಖೇದ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹುತಾತ್ಮ ಪೊಲೀಸರ ಬಲಿದಾನವನ್ನು ಉತ್ತರ ಪ್ರದೇಶ ಎಂದಿಗೂ ಮರೆಯುವುದಿಲ್ಲ. ಬಹಳ ಧೈರ್ಯದಿಂದ ಪೊಲೀಸರು ತಮ್ಮ ಕರ್ತವ್ಯ ನಡೆಸಿದ್ದರು. ಅವರ ಬಲಿದಾನ ನಿಷ್ಟ್ರಯೋಜಕವಾಗಲು ಬಿಡುವುದಿಲ್ಲ ಎಂದಿದ್ದಾರೆ.

Comments are closed.