ರಾಷ್ಟ್ರೀಯ

ದೆಹಲಿಯಲ್ಲಿ ಒಂದೇ ದಿನ 2,373 ಮಂದಿಯಲ್ಲಿ ವೈರಸ್ ಪತ್ತೆ, 92,000ಕ್ಕೇರಿದ ಸೋಂಕಿತರ ಸಂಖ್ಯೆ

Pinterest LinkedIn Tumblr

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ 2,373 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 92,000ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 61 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 2,864ಕ್ಕೆ ಏರಿಕೆಯಾಗಿದೆ. ಈ ನಡುವೆ ನಿನ್ನೆ ಒಂದೇ ದಿನ 3,015 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಇದರಂತೆ ದೆಹಲಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 92,175 ಇದ್ದು, ಈ ಪೈಕಿ 63,007 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ ದೆಹಲಿಯಲ್ಲಿನ್ನೂ 26,304 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

Comments are closed.