ರಾಷ್ಟ್ರೀಯ

24 ಗಂಟೆಗಳಲ್ಲಿ ದೇಶಾದ್ಯಂತ 2,42,383 ಕೋವಿಡ್-19 ಪರೀಕ್ಷೆ; ಒಟ್ಟಾರೆ ಜುಲೈ 4ರವರೆಗೂ 95,40,132 ಕೋವಿಡ್-19 ಪರೀಕ್ಷೆ

Pinterest LinkedIn Tumblr

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,42,383 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,42,383 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜುಲೈ.4ರವರೆಗೂ 95,40,132 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಕೊರೋನಾ ಸ್ಪೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ 22,000ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 649,889ಕ್ಕೆ ಏರಿಕೆಯಾಗಿದೆ.

Comments are closed.