ರಾಷ್ಟ್ರೀಯ

ದೇಶದಲ್ಲಿ ಇಂದು (ರವಿವಾರ) 24,850 ಕೊರೋನಾ ಪ್ರಕರಣಗಳು ಪತ್ತೆ: 613 ಮಂದಿ ಸಾವು

Pinterest LinkedIn Tumblr


ನವದೆಹಲಿ(ಜು.05): ಕೊರೋನಾ ಸೋಂಕು ಹರಡುವಿಕೆ ಬಹಳ‌ ಕಡಿಮೆ ಇದ್ದಾಗ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಆದರೀಗ, ಸೋಂಕು ಹರಡುವಿಕೆ ಹೆಚ್ಚಾದಾಗ ನಾಮಕಾವಸ್ತೆಗೆ ಮಾತ್ರ ಲಾಕ್ಡೌನ್ ಜಾರಿಗೊಳಿಸಿದ್ದರಿಂದ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದೆ. ಇದರ ಪರಿಣಾಮವಾಗಿ 6 ಲಕ್ಷ ಗಡಿ ದಾಟಿದ ಸೋಂಕು ಪೀಡಿತರ ಸಂಖ್ಯೆ ಎರಡೇ ದಿನದ ಅಂತರದಲ್ಲಿ ಆರು ಮುಕ್ಕಾಲು ಲಕ್ಷವನ್ನೂ ದಾಟಿದೆ. ಅಲ್ಲದೆ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ 24,850 ಪ್ರಕರಣಗಳು ದಾಖಲಾಗಿವೆ.

ಭಾರತದಲ್ಲಿ ಜೂನ್ 26ರಿಂದ 18 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಹಾಗೂ ಜೂನ್‌ 27ರಂದು 19 ಸಾವಿರಕ್ಕೂ ‌ಹೆಚ್ಚು ವರದಿಯಾಗತೊಡಗಿದ್ದವು. ಆದರೆ ಎರಡು ದಿನದ ಬಳಿಕ‌ ಅಂದರೆ ಜೂನ್ 29ರಂದು ಮತ್ತು ಜೂನ್ 30ರಂದು ಮತ್ತೆ 18 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಮಾತ್ರ ದಾಖಲಾಗಿದ್ದವು. ಜುಲೈ 1ನೇ ತಾರೀಖು 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿದ್ದವು.‌ ಜುಲೈ 4ರಂದು ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು 24 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಶನಿವಾರ 24,850 ಪ್ರಕರಣಗಳು ಕಂಡುಬಂದಿದ್ದು, ಇದರಿಂದ ದೇಶದ ಕೊರೋನಾ ಪೀಡಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ.

ಇದಲ್ಲದೆ ಶನಿವಾರ 613 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 19 ಸಾವಿರವನ್ನೂ ಮೀರಿದ್ದು, 19,268ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 4,09,083 ಜನ ಮಾತ್ರ. ದೇಶದಲ್ಲಿ ಇನ್ನೂ 2,44,814 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಜೂನ್ 1ರಂದು 8,171, ಜೂನ್ 2ರಂದು 8,909, ಜೂನ್ 3ರಂದು 9,304, ಜೂನ್ 4ರಂದು 9,851, ಜೂನ್ 5ರಂದು 9,887, ಜೂನ್ 6ರಂದು 9,971, ಜೂ 7ರಂದು 9,983, ಜೂನ್ 8ರಂದು 9987, ಜೂನ್‌ 9ರಂದು 9,985, ಜೂನ್ 10ರಂದು 9,996, ಜೂನ್ 11ರಂದು 10,956, ಜೂನ್ 12ರಂದು‌ 11,458, ಜೂನ್ 13ರಂದು 11,929, ಜೂನ್ 14ರಂದು 11,502, ಜೂನ್ 15ರಂದು 10,667, ಜೂನ್ 16ರಂದು 10,974, ಜೂನ್ 17ರಂದು 12,881, ಜೂನ್‌ 18ರಂದು 13,586, ಜೂನ್ 19ರಂದು 14,516, ಜೂನ್ 20ರಂದು 15,413, ಜೂನ್ 21ರಂದು 14,821, ಜೂನ್ 22ರಂದು 14,933, ಜೂನ್ 23ರಂದು 15,968, ಜೂನ್ 24ರಂದು‌ 16,922, ಜೂನ್ 25ರಂದು 17,296, ಜೂನ್ 26ರಂದು 18,552, ಜೂನ್ 27ರಂದು 19,906, ಜೂನ್ 28ರಂದು 19,459, ಜೂನ್ 29ರಂದು 18,522, ಜೂನ್ 30ರಂದು 18,653, ಜುಲೈ 1ರಂದು 19,148, ಜುಲೈ 2ರಂದು 20,903, ಜುಲೈ 3ರಂದು 22,771, ಜುಲೈ 4ರಂದು 24,850 ಹೊಸ ಪ್ರಕರಣಗಳು ಪತ್ತೆಯಾಗಿವೆ.

Comments are closed.