ರಾಷ್ಟ್ರೀಯ

ಕಾನ್ಪುರ ಎಕ್‍ಕೌಂಟರ್ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆ ಬಂಧನ

Pinterest LinkedIn Tumblr

ಲಕ್ನೋ: ಕಾನ್ಪುರ ಎಕ್‍ಕೌಂಟರ್ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆಯನ್ನು ಮಧ್ಯಪ್ರದೇಶದ ಉಜ್ಜೈನ್ ನಲ್ಲಿ ಬಂಧಿಸಲಾಗಿದೆ.

ಇಂದು ಬೆಳಗ್ಗೆ ವಿಕಾಸ್ ದುಬೆ ಉಜ್ಜೈನ್ ನಲ್ಲಿರುವ ಮಹಾಕಾಲ್ ದೇವಸ್ಥಾನಕ್ಕೆ ಹೋಗಿದ್ದನು. ದೇವಸ್ಥಾನದ ಭದ್ರತಾ ಸಿಬ್ಬಂದಿ ದುಬೆಯನ್ನು ಗುರುತಿಸಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೇವಸ್ಥಾನದಿಂದ ಹೊರ ಬರೋಷ್ಟರಲ್ಲಿ ಬಂದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು ದುಬೆ ಅವಿತಿದ್ದ ಮನೆಯತ್ತ ಆಗಮಿಸುತ್ತಿದ್ದರು.ಈ ವೇಳೆ ಗುಂಡಿನ ಮಳೆ ಸುರಿಸಿದ್ದಾರೆ. ಪರಿಣಾಮ ಡಿವೈಎಸ್ಪಿ ದೇವೇಂದ್ರ ಮಿಶ್ರಾ, ಮೂವರು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಗಳು ಹಾಗೂ 4 ಪೊಲೀಸರು ಮೃತಪಟ್ಟಿದ್ದರು. ಇದೇ ಸಂದರ್ಭದಲ್ಲಿ ದುಬೆ ಬೆಂಬಲಿಗರು ಪೊಲೀಸರ ಬಳಿಯಿದ್ದ ಎಕೆ-47 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದರು.

Comments are closed.