ರಾಷ್ಟ್ರೀಯ

ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಎನ್’ಕೌಂಟರ್: 4 ನಕ್ಸಲರ ಹತ್ಯೆ

Pinterest LinkedIn Tumblr

ಪಶ್ಚಿಮ ಚಂಪಾರಣ್: ಬಿಹಾರ ರಾಜ್ಯದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬಗಹ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್’ಕೌಂಟರ್ ನಡೆಸಿದ್ದು ನಾಲ್ವರು ನಕ್ಸಲರನ್ನು ಹತ್ಯೆ ಮಾಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಬಗಹ ಎಂಬ ಪ್ರದೇಶದಲ್ಲಿ ನಕ್ಸಲರು ಬೀಡು ಬಿಟ್ಟಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ್ದ ಸಶಸ್ತ್ರ ಸೀಮಾ ಬಲ (ಎಸ್ಎಸ್’ಬಿ) ಹಾಗೂ ವಿಶೇಷ ಕಾರ್ಯಾಚರಣಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.

ಕಾರ್ಯಾಚರಣೆಯಲ್ಲಿ ಇದೀಗ ನಾಲ್ವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಪಶ್ಚಿಮ ಚಂಪಾರಣ್ ಜಿಲ್ಲೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಎನ್’ಕೌಂಟರ್ ನಡೆದ ಸ್ಥಲದಲ್ಲಿ ಶಸ್ತ್ರಾಸ್ತ್ರಘಳು ಹಾಗೂ ಸ್ಫೋಟಕ ವಸ್ತುಗಳನ್ನು, 3 ಸೆಲ್ಫ್ ಲೋಡಿಂಗ್ ರೈಫಲ್ಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Comments are closed.