ರಾಷ್ಟ್ರೀಯ

ದೇಶದಲ್ಲಿ ಇಂದು (ಶನಿವಾರ) 34,884 ಕೊರೋನಾ ಪ್ರಕರಣಗಳು ಪತ್ತೆ: 672 ಸಾವು

Pinterest LinkedIn Tumblr


ನವದೆಹಲಿ (ಜು.18): ಕೊರೊನಾ ಸೋಂಕು ಹರಡುವಿಕೆ ವ್ಯಾಪಕವಾಗಿದ್ದರೂ ಲಾಕ್​ಡೌನ್ ನಿಯಮಗಳನ್ನು ಸಡಿಲಿಸಿ ಅನ್ ಲಾಕ್ 1 ಮತ್ತು 2 ಅನ್ನು ಜಾರಿ ಮಾಡಿದ ಪರಿಣಾಮ ದೇಶದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಲೇ ಇದೆ. ಪರಿಣಾಮವಾಗಿ ದೇಶದ ಕೊರೋನಾ ಸೋಂಕು ಪೀಡಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ. ಅದೂ ಅಲ್ಲದೆ ಈಗ ಪ್ರತಿನಿತ್ಯ 34 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗತೊಡಗಿವೆ.

ಭಾರತದಲ್ಲಿ ಜುಲೈ 1ರಂದು 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 2ರಂದು 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಜುಲೈ 3ರಂದು 22 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 4ರಿಂದ 24 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 9ರಂದು 26 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 10ರಂದು 27 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 11ರಿಂದ 28 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 14ರಂದು 29 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಹಾಗೂ ಜುಲೈ 15ರಂದು 32 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿದ್ದವು.‌ ಜುಲೈ 16ರಂದು 34 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುವ ಟ್ರೆಂಡ್ ಶುರುವಾಗಿದ್ದು ಅದೇ ಮುಂದುವರೆದಿದೆ. ಶುಕ್ರವಾರ 34,884 ಪ್ರಕರಣಗಳು ಪತ್ತೆಯಾಗಿದ್ದು ದೇಶದ ಕೊರೊನಾ ಪೀಡಿತರ ಸಂಖ್ಯೆ 10,38,716ಕ್ಕೆ ಏರಿಕೆಯಾಗಿದೆ.

ಇದಲ್ಲದೆ ಶುಕ್ರವಾರ 672 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 26,273ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 6,53,750 ಜನ ಮಾತ್ರ. ದೇಶದಲ್ಲಿ ಇನ್ನೂ 3,58,692 ಜನರಲ್ಲಿ ಕೊರೊನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಜೂನ್ 11ರಂದು 10,956, ಜೂನ್ 12ರಂದು 11,458, ಜೂನ್ 13ರಂದು 11,929, ಜೂನ್ 14ರಂದು 11,502, ಜೂನ್ 15ರಂದು 10,667, ಜೂನ್ 16ರಂದು 10,974, ಜೂನ್ 17ರಂದು 12,881, ಜೂನ್ 18ರಂದು 13,586, ಜೂನ್ 19ರಂದು 14,516, ಜೂನ್ 20ರಂದು 15,413, ಜೂನ್ 21ರಂದು 14,821, ಜೂನ್ 22ರಂದು 14,933, ಜೂನ್ 23ರಂದು 15,968, ಜೂನ್ 24ರಂದು 16,922, ಜೂನ್ 25ರಂದು 17,296, ಜೂನ್ 26ರಂದು 18,552, ಜೂನ್ 27ರಂದು 19,906, ಜೂನ್ 28ರಂದು 19,459, ಜೂನ್ 29ರಂದು 18,522, ಜೂನ್ 30ರಂದು 18,653, ಜುಲೈ 1ರಂದು 19,148, ಜುಲೈ 2ರಂದು 20,903, ಜುಲೈ 3 ರಂದು 22,771, ಜುಲೈ 4ರಂದು 24,850, ಜುಲೈ 5 ರಂದು 24,248, ಜುಲೈ 6ರಂದು 22,252, ಜುಲೈ 7ರಂದು 22,752, ಜುಲೈ 8ರಂದು 24,879, ಜುಲೈ 9ರಂದು 26,506, ಜುಲೈ 10ರಂದು 27,114, ಜುಲೈ 11ರಂದು 28,637, ಜುಲೈ 12ರಂದು‌ 28,701, ಜುಲೈ 13ರಂದು 28,498, ಜುಲೈ 14ರಂದು 29,429, ಜುಲೈ 15ರಂದು 32,695 ಹಾಗೂ ಜುಲೈ 16ರಂದು‌ 34,956 ಹೊಸ ಪ್ರಕರಣಗಳು ಪತ್ತೆಯಾಗಿವೆ.

Comments are closed.