ಕನೌಜ್: ಉತ್ತರಪ್ರದೇಶದ ಕನೌಜ್’ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಸಾವನ್ನಪ್ಪಿದ್ದು, 18 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಭವಿಸಿದೆ.
ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಗ್ರಾ-ಲಖನೌ ಎಕ್ಸ್’ಪ್ರೆಸ್ ಬಸ್ ಇಂದು ಬೆಳಿಗ್ಗೆ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ 5 ಮಂದಿ ದುರ್ಮರಣವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಘಟನೆಯಲ್ಲಿ 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳಕ್ಕೆ ಬಂದಿರುವ ಪೊಲೀಸರು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತಕ್ಕೀಡಾದ ಬಸ್ ಬಿಹಾರದ ದರ್ಭಾಂಗ ದಿಂದ ದೆಹಲಿಗೆ ತೆರಳುತ್ತಿದ್ದು, ಸೌರಿಖ್ ಪೊಲೀಸ್ ಠಾಣಾ ನಿಯಂತ್ರಣ ಪ್ರದೇಶದ ಬಳಿ ಬರುತ್ತಿದ್ದಂತೆಯೇ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
Comments are closed.