ರಾಷ್ಟ್ರೀಯ

ಜಾರ್ಖಂಡ್: ಲಾಕ್ ಡೌನ್ ಉಲ್ಲಂಘಿಸಿದವರಿಗೆ 2 ವರ್ಷ ಜೈಲು ಶಿಕ್ಷೆ-ಮಾಸ್ಕ್ ಧರಿಸದವರಿಗೆ 1 ಲಕ್ಷ ರೂ. ದಂಡ

Pinterest LinkedIn Tumblr

ರಾಂಚಿ: ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜಾರ್ಖಂಡ್ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಲಾಕ್ ಡೌನ್ ನಿಯಮ ಉಲ್ಲಂಘಿಸಿದವರಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ಮಾಸ್ಕ್ ಧರಿಸದವರಿಗೆ 1 ಲಕ್ಷ ರೂ. ದಂಡ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ.

ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು 12 ಲಕ್ಷ ಗಡಿ ದಾಟಿದ್ದು, ಲಸಿಕೆ ಬರುವವರೆಗೂ ಕೊರೋನಾವೈರಸ್ ವಿರುದ್ಧ ಧೈರ್ಯದಿಂದ ಹೋರಾಡಬೇಕಾದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 45, 720 ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 12 ಲಕ್ಷಕ್ಕೆ ಏರಿಕೆ ಆಗಿದೆ. ಒಂದು ದಿನದಲ್ಲಿ 1, 129 ಸಾವಿನೊಂದಿಗೆ ದೇಶದಲ್ಲಿ ಮೃತರ ಸಂಖ್ಯೆ 29, 861ಕ್ಕೆ ಏರಿಕೆಯಾಗಿದೆ.

Comments are closed.