ನವದೆಹಲಿ: ಸಚಿನ್ ಪೈಲಟ್ ಮತ್ತು ಇತರ 18 ಮಂದಿ ಬಂಡಾಯ ಶಾಸಕರು ತಮ್ಮ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ರಾಜಸ್ತಾನ ಹೈಕೋರ್ಟ್ ಆದೇಶ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ ಆರ್ ಗವೈ ಮತ್ತು ಕೃಷ್ಣ ಮುರಳಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಶಾಸಕರ ಅನರ್ಹತೆ ಪ್ರಕರಣದಲ್ಲಿ ರಾಜಸ್ತಾನ ಹೈಕೋರ್ಟ್ ವಿಚಾರಣೆಯಲ್ಲಿ ಮಧ್ಯ ಪ್ರವೇಶಿಸಲು ನಿರಾಕರಿಸಿದೆ.
ನಾಳೆ ಹೈಕೋರ್ಟ್ ನ ತೀರ್ಪು ಹೊರಬರಲಿ, ಅದರ ತೀರ್ಪಿನ ಮೇಲೆ ಸರ್ವೋಚ್ಛ ನ್ಯಾಯಾಲಯದ ತೀರ್ಪು ನಿರ್ಧಾರವಾಗುತ್ತದೆ ಎಂದು ಹೇಳಿದೆ.
ಈ ಮೂಲಕ ಸಚಿನ್ ಪೈಲಟ್ ಅವರಿಗೆ ಸುಪ್ರೀಂ ಕೋರ್ಟ್ ನಿಲುವಿನಿಂದ ಇಂದು ವರವಾಗಿದೆ ಎನ್ನಬಹುದು. ನಾಳೆ ರಾಜಸ್ತಾನ ಹೈಕೋರ್ಟ್ ಏನೇ ತೀರ್ಪು ನೀಡಿದರೂ ಸಹ ಅಂತಿಮ ಫಲಿತಾಂಶ ನಂತರ ಸುಪ್ರೀಂ ಕೋರ್ಟ್ ನೀಡುವ ತೀರ್ಪಿನ ಮೇಲೆ ಅವಲಂಬಿತವಾಗುತ್ತದೆ.
Comments are closed.