ರಾಷ್ಟ್ರೀಯ

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 49,310 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 1.28 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

Pinterest LinkedIn Tumblr

a

ನವದೆಹಲಿ: ಭಾರತದಲ್ಲಿ ಹೊಸ ಸೋಂಕಿತರು ಮತ್ತು ಸಾವಿನ ಪ್ರಮಾಣದಲ್ಲಿ ಶುಕ್ರವಾರ ಹೊಸ ದಾಖಲೆ ಸೃಷ್ಟಿಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 49,310 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇದರೊಂದಿಗೆ ದೇಶದಲ್ಲಿ ಈ ವರೆಗೂ ಒಟ್ಟು ಸೋಂಕಿತರ ಸಂಖ್ಯೆ 12,87,945ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ನಿನ್ನೆ ಒಂದೇ ದಿನ 740 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 30,601ಕ್ಕೆ ತಲುಪಿದೆ.

ಇನ್ನು 12,87,945 ಮಂದಿ ಸೋಂಕಿತರ ಪೈಕಿ 8,17,209 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ದೇಶದಲ್ಲಿನ್ನೂ 4,40,135 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ನಿನ್ನೆ 9,896 ಕೇಸ್, 298 ಸಾವು, ತಮಿಳುನಾಡಿನಲ್ಲಿ 6472, ಹೊಸ ಕೇಸ್, 88 ಮಂದಿ ಸಾವು, ಕರ್ನಾಟಕದಲ್ಲಿ 5,030 ಕೊರೋನಾ ಕೇಸ್, 97 ಸಾವು, ಆಂಧ್ರಪ್ರದೇಶ ದಾಖಲೆಯ 7,998 ಕೇಸ್, 61 ಸಾವು, ಕೇರಳದಲ್ಲಿ 1078 ಹೊಸ ಪ್ರಕರಣ, 5 ಮಂದಿ ಸಾವು ದಾಖಲಾಗಿದೆ.

ಬಹುತೇಕ ರಾಜ್ಯಗಳಲ್ಲಿ ರೋಗ ಪತ್ತೆ ಪ್ರಮಾಣವನ್ನು ಹಲವು ಪಟ್ಟು ಹೆಚ್ಚಳ ಮಾಡಲಾಗಿದೆ. ಹೀಗಾಗಿ ಹೊಸ ಸೋಂಕಿತರು ಪತ್ತೆಯಾಗುವ ಪ್ರಮಾಣ ಕೂಡ ಏರಿಕೆಯಾಗಿದೆ.

Comments are closed.