ನವದೆಹಲಿ: ದೇಶದಲ್ಲಿ ದಿನೇ ದಿನೇ ಕೊರೊನಾವೈರಸ್ ಪ್ರಕರಣಗಳು ದಾಖಲೆಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಗರಿಷ್ಠ 48,661 ಹೊಸ ಕರೋನಾ ಪ್ರಕರಣಗಳು ವರದಿಯಾಗಿದ್ದು, 705 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು 13,85,522 ಕರೋನಾವೈರಸ್ (Coronavirus) ವರದಿಯಾಗಿದ್ದು ಶನಿವಾರದ ವೇಳೆಗೆ ಸಾವಿನ ಸಂಖ್ಯೆ 32,063 ಕ್ಕೆ ಏರಿದೆ. 4,67,882 ಸಕ್ರಿಯ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗುಣಮುಖರಾದವರ ಸಂಖ್ಯೆ 8 ಲಕ್ಷ 85 ಸಾವಿರ 577 ತಲುಪಿದೆ.
ದೇಶದ ರಾಜಧಾನಿ ದೆಹಲಿಯಲ್ಲಿ ಶನಿವಾರ 1,142 ಕೋವಿಡ್ -19 (Covid-19) ಹೊಸ ಪ್ರಕರಣಗಳು ದಾಖಲಾಗಿದ್ದು ದೆಹಲಿಯಲ್ಲಿ ಇದುವರೆಗೆ 1.29 ಲಕ್ಷಕ್ಕೂ ಹೆಚ್ಚು ಜನರು ಕರೋನಾವೈರಸ್ ಸೋಂಕಿಗೆ ಒಳಗಾಗಿದ್ದಾರೆ ಎಂದು ದೃಢಪಟ್ಟಿದೆ. ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 29 ರೋಗಿಗಳು ಸಾವನ್ನಪ್ಪಿದ್ದು ಇದುವರೆಗೆ 3,806 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಏತನ್ಮಧ್ಯೆ ದೆಹಲಿಯಲ್ಲಿ ಹೊಸ ಕೋವಿಡ್ -19 ಪ್ರಕರಣಗಳ ಪ್ರಮಾಣ ಪ್ರತಿದಿನ ಐದು ಪ್ರತಿಶತದಷ್ಟಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ. ಆರೋಗ್ಯ ಬುಲೆಟಿನ್ ಪ್ರಕಾರ ಹೊಸ ಪ್ರಕರಣಗಳ ಪ್ರಮಾಣವು 5.5 ಪ್ರತಿಶತದಷ್ಟಿದ್ದು, ಇದು ಶುಕ್ರವಾರ 5.3 ಕ್ಕೆ ಇಳಿದಿದೆ ಎಂದು ತಿಳಿದು ಬಂದಿದೆ.
ಆಂಧ್ರಪ್ರದೇಶದಲ್ಲಿ ಹೊಸದಾಗಿ 7,813 ಕರೋನಾ ವೈರಸ್ ಪ್ರಕರಣಗಳು ವರದಿಯಾಗಿವೆ, ನಂತರ ಒಟ್ಟು ಸೋಂಕಿತರ ಸಂಖ್ಯೆ ಶನಿವಾರ 88,671ಕ್ಕೆ ಏರಿದೆ. ರಾಜ್ಯದಲ್ಲಿ ಸತ್ತವರ ಸಂಖ್ಯೆ 925ಕ್ಕೆ ಏರಿತು.
ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ, ಕೋವಿಡ್ -19 ರ 3,208 ರೋಗಿಗಳು ಚೇತರಿಸಿಕೊಂಡ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇಲ್ಲಿಯವರೆಗೆ 43,255 ರೋಗಿಗಳು ಆರೋಗ್ಯವಾಗಿದ್ದಾರೆ ಮತ್ತು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, 44,431 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ ತಮಿಳುನಾಡಿನಲ್ಲಿ 6,988 ಹೊಸ ಪ್ರಕರಣಗಳು ವರದಿಯಾದ ನಂತರ ಈ ಸಾಂಕ್ರಾಮಿಕ ರೋಗಿಗಳ ಸಂಖ್ಯೆ 2,06,737ಕ್ಕೆ ಏರಿದೆ. ಇದಲ್ಲದೆ ಸೋಂಕಿನಿಂದಾಗಿ 89 ಜನರು ಸಾವನ್ನಪ್ಪಿದ ನಂತರ ಸಾವಿನ ಸಂಖ್ಯೆ 3,409ಕ್ಕೆ ತಲುಪಿದೆ. ಆರೋಗ್ಯ ಇಲಾಖೆ ಹೊರಡಿಸಿದ ಬುಲೆಟಿನ್ ಪ್ರಕಾರ ಇಂದು ಚೇತರಿಸಿಕೊಂಡ ನಂತರ 7,758 ಜನರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಒಟ್ಟು 1,51,055 ಜನರು ಈವರೆಗೆ ಚೇತರಿಕೆ ಕಂಡಿದ್ದಾರೆ.
Comments are closed.