ನವದೆಹಲಿ: ದೇಶದಲ್ಲಿ ಸೋಮವಾರ ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 49,931 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿದೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,35,453ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಮತ್ತೊಂದೆ ಒಂದೇ ದಿನ 708 ಮಂದಿ ಮಹಾಮಾರಿ ವೈರಸ್’ಗೆ ಬಲಿಯಾಗಿದ್ದು, ಮೃತರ ಸಂಖ್ಯೆ 32,771ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಇನ್ನು 14,35,453 ಮಂದಿ ಸೋಂಕಿತರ ಪೈಕಿ 9,17,568 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ದೇಶದಲ್ಲಿ ಇನ್ನೂ 4,85,114 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಇನ್ನು 3,75,799 ಸೋಂಕಿತರು ಹಾಗೂ 13,656 ಸಾವಿನೊಂದಿಗೆ ದೇಶದಲ್ಲೇ ಸೋಂಕು ಹಾಗೂ ಸಾವಿನಲ್ಲಿ ಮಹಾರಾಷ್ಟ್ರ ಪ್ರಥಮ ಸ್ಥಾನದಲ್ಲಿದೆ. 2,13,723 ಸೋಂಕಿತರೊಂದಿಗೆ ತಮಿಳುನಾಡು ಎರಡನೇ ಸ್ಥಾನದಲ್ಲಿದೆ.
Comments are closed.