ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.
ಭಾರತೀಯ ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಪಾಕಿಸ್ತಾನದ ಓರ್ವ ಯೋಧ ಸಾವನ್ನಪ್ಪಿದ್ದು, ಇತರ ಎಂಟು ಯೋಧರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನ ಸೇನೆ ಸೋಮವಾರ ಜಮ್ಮು ಮತ್ತು ಕಾಶ್ಮೀರದ ಹಳ್ಳಿಗಳನ್ನು ಗುರಿಯಾಗಿಸಿಕೊಂಡು ಮತ್ತೊಮ್ಮೆ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದೆ.
ಗಡಿನಿಯಂತ್ರಣಾ ರೇಖೆಯಲ್ಲಿ ಹಾಜಿಪಿರ್, ಪೂಂಚ್, ಛಾಂಬ್ ಮತ್ತು ರಾಖ್ ಚಿಕ್ರಿ ಸೆಕ್ಟರ್ ಗಳಲ್ಲಿ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಈ ಪ್ರತಿದಾಳಿಯಲ್ಲಿ ಓರ್ವ ಪಾಕಿಸ್ತಾನಿ ಸೈನಿಕ ಸಾವನ್ನಪ್ಪಿದ್ದು, ಇತರ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭೀಂಬರ್ ಪ್ರದೇಶದಲ್ಲಿ ಪಾಕಿಸ್ತಾನ ಸೈನಿಕ ಸಾವನ್ನಪ್ಪಿದ್ದರೆ, ಹಾಜಿಪಿರ್, ರಾಖ್ ಚಿಕ್ರಿ ಮತ್ತು ಪಾದಾರ್ ಪ್ರದೇಶಗಳಲ್ಲಿ ತಲಾ ಒಬ್ಬರು ಗಾಯಗೊಂಡಿದ್ದಾರೆ. ಪೂಂಚ್ ವಲಯದಲ್ಲಿ ಐದು ಪಾಕ್ ಯೋಧರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Comments are closed.