ರಾಷ್ಟ್ರೀಯ

ದೇಶದಲ್ಲಿ ನಿಲ್ಲದ ಕೊರೋನಾ ಆರ್ಭಟ: 24 ಗಂಟೆಗಳಲ್ಲಿ 47,704 ಮಂದಿಯಲ್ಲಿ ವೈರಸ್ ಪತ್ತೆ; 14.8ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ- 33,425 ಮಂದಿ ಬಲಿ

Pinterest LinkedIn Tumblr

ನವದೆಹಲಿ: ದೇಶದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 47,704 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,83,157ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

ಈ ನಡುವೆ ಒಂದೇ ದಿನ 654 ಮಂದಿ ಬಲಿಯಾಗಿದ್ದು, ದೇಶದಲ್ಲಿ ಕೊರೋನಾಗೆ ಸಾವನ್ನಪ್ಪಿದವರ ಸಂಖ್ಯೆ 33,425 ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.

ಇನ್ನು 14,83,157 ಮಂದಿ ಸೋಂಕಿತರ ಪೈಕಿ 9,52,744 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 4,96,988 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.

ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ ಹಲವು ದಿನಗಳ ಬಳಿಕ ಸೋಂಕು ಇಳಿಕೆ ಕಂಡಿದೆ. ದೆಹಲಿಯಲ್ಲಿ 2 ತಿಂಗಳಲ್ಲೇ ಕನಿಷ್ಟ 613 ಕೇಸ್ ದಾಖಲಾಗಿದೆ.

Comments are closed.