ರಾಷ್ಟ್ರೀಯ

ಮಾಯನ್ಮಾರ್ ಗಡಿಯಲ್ಲಿನ ನಾಲ್ಕನೇ ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ದಾಳಿ; ಮೂವರು ಯೋಧರು ಹುತಾತ್ಮ

Pinterest LinkedIn Tumblr

ಇಂಫಾಲ್: ಮಾಯನ್ಮಾರ್ ಗಡಿಯಲ್ಲಿನ ನಾಲ್ಕನೇ ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಮ್ಯಾನ್ಮಾರ್‌ನ ಗಡಿಯ ಸಮೀಪ ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಸ್ಥಳೀಯ ಗುಂಪಿನ ಪೀಪಲ್ಸ್ ಲಿಬರೇಶನ್ ಆರ್ಮಿಯ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ. ಇದರಲ್ಲಿ 4 ಅಸ್ಸಾಂ ರೈಫಲ್ಸ್ ಘಟಕದ ಮೂವರು ಯೋಧರು ಪ್ರಾಣ ಕಳೆದುಕೊಂಡಿದ್ದು ನಾಲ್ವರು ಗಾಯಗೊಂಡಿದ್ದಾರೆ.

ಗಸ್ತಿನಲ್ಲಿದ್ದ ಭಾರತೀಯ ಯೋಧರ ಮೇಲೆ ಭಯೋತ್ಪಾದಕರು ಐಇಡಿ ಸ್ಫೋಟಿಸಿದ್ದು ಬಳಿಕ ಗುಂಡಿನ ದಾಳಿ ನಡೆಸಿದ್ದಾರೆ.

ಮಯನ್ಮಾರ್ ಬಂಡುಕೋರರಿಗೆ ಚೀನಾ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದ್ದು ಈ ಮೂಲಕ ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುತ್ತಿದೆ ಎಂಬ ಹೇಳಿಕೆ ಬೆನ್ನಲ್ಲೇ ಇದೀಗ ಉಗ್ರರು ಭಾರತೀಯ ಸೇನೆ ಮೇಲೆ ದಾಳಿ ನಡೆಸಿದ್ದಾರೆ.

ಮಯನ್ಮಾರ್ ಹಿರಿಯ ಜನರಲ್ ಮಿನ್ ಆಂಗ್ ಹೇಲಿಂಗ್ ಅವರು ಮಯನ್ಮಾರ್ ನಲ್ಲಿ ಸಕ್ರಿಯವಾಗಿರುವ ಭಯೋತ್ಪಾದಕರ ಸಂಘಟನೆಗಳನ್ನು ಬಲಾಢ್ಯರಾಷ್ಟ್ರ ಬೆಂಬಲಿಸುತ್ತಿದೆ ಎಂದು ಹೇಳಿದರು.

Comments are closed.