
ನವದೆಹಲಿ: ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ದೇಶಾದ್ಯಂತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ.
ಮಳೆಗಾಲದ ನಾಲ್ಕು ತಿಂಗಳ ದ್ವಿತೀಯಾರ್ಧ(ಆಗಸ್ಟ್ ಮತ್ತು ಸೆಪ್ಟೆಂಬರ್)ದಲ್ಲಿ ದೀರ್ಘಕಾಲೀನ ಸರಾಸರಿಯ 97 ರಷ್ಟು ಮಳೆಯಾಗುವ ಸಂಭವವಿದೆ ಹವಾಮಾನ ಇಲಾಖೆ ತಿಳಿಸಿದೆ.
ಈ ಮಧ್ಯೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 3 ರ ತನಕ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದ ಬೆಳಗಾವಿ, ಹಾವೇರಿ, ಕಲಬುರ್ಗಿ , ಬೀದರ್ ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದಿನಿಂದ ಆಗಸ್ಟ್ 2 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನೈರುತ್ಯ ಮಾನ್ಸೂನ್ ಹಿನ್ನೆಲೆಯಲ್ಲಿ ಮತ್ತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಎರಡು ತಿಂಗಳ ಕಾಲ ಎಲ್ಲಾ ಕಡೆ ಸಾಧಾರಣೆ ಮಳೆಯಾಗಲಿದೆ ಎಂದಿರುವ ಹವಾಮಾನ ಇಲಾಖೆ ಉತ್ತಮ ಬೆಳೆಯ ನಿರೀಕ್ಷೆ ಮಾಡಿದೆ.
Comments are closed.