ರಾಷ್ಟ್ರೀಯ

ಅಮಿತ್​ ಶಾಗೂ ಕೊರೋನಾ: ಆಸ್ಪತ್ರೆಗೆ ದಾಖಲು

Pinterest LinkedIn Tumblr


ನವದೆಹಲಿ (ಆ. 2): ಜಗತ್ತಿನ ಬಹುತೇಕ ಎಲ್ಲ ದೇಶಗಳನ್ನೂ ಬೆಂಬಿಡದೆ ಕಾಡುತ್ತಿರುವ ಕೊರೋನಾ ಸೋಂಕಿಗೆ ಭಾರತವೂ ತತ್ತರಿಸಿಹೋಗಿದೆ. ಕೇಂದ್ರದ ಗೃಹ ಸಚಿವ ಅಮಿತ್​ ಶಾ ಅವರಿಗೆ ಕೂಡ ಕೊರೋನಾ ಪಾಸಿಟಿವ್ ದೃಫಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದಿದ್ದವರು ತಕ್ಷಣ ಆ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೂ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರನ್ನು ಇಂದು ಆಸ್ಪತ್ರೆಗೆ ಸೇರಿಸಲಾಗಿದೆ. ಈ ಬಗ್ಗೆ ಟ್ವಿಟ್ಟರ್​ನಲ್ಲಿ ಖುದ್ದು ಖಚಿತಪಡಿಸಿರುವ ಅಮಿತ್​ ಶಾ ಪ್ರಾಥಮಿಕ ವೈದ್ಯಕೀಯ ಪರೀಕ್ಷೆ ವೇಳೆ ನನಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿಯೇ ಇದೆ. ಆದರೆ, ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದೊಂದು ವಾರದಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದಾರೆ.

ಗೃಹ ಸಚಿವ ಅಮಿತ್​ ಶಾ ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ. ರಾಷ್ಟ್ರಪತಿ ಭವನ ಸೇರಿದಂತೆ ಬಹುತೇಕ ಕಡೆಗಳಲ್ಲಿ ಕೊರೋನಾ ಸೋಂಕು ಕಂಡುಬಂದಿತ್ತು. ಇದೀಗ ಕೇಂದ್ರದ ಗೃಹ ಸಚಿವರಿಗೂ ಕೊರೋನಾ ಸೋಂಕು ತಗುಲಿದೆ. ಇನ್ನು ಮೂರು ದಿನಗಳಲ್ಲಿ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ನಿರ್ಮಾಣದ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳುವವರ ಪಟ್ಟಿಯಲ್ಲಿ ಅಮಿತ್​ ಶಾ ಹೆಸರು ಕೂಡ ಇತ್ತು. ಆದರೆ, ಅವರು ಆಸ್ಪತ್ರೆಗೆ ದಾಖಲಾಗಿರುವುದರಿಂದ ರಾಮಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳುವುದಿಲ್ಲ.

Comments are closed.