ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 52,972 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.
ಇನ್ನು ನಿನ್ನೆ ಒಂದೇ ದಿನ 771 ಮಂದಿ ಮಹಾಮಾರಿ ವೈರಸ್’ಗೆ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 38,135ಕ್ಕೆ ಏರಿಕೆಯಾಗಿದೆ.
ಒಂದೇ ದಿನ 52,972 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 18,03,696 ಕ್ಕೆ ಏರಿಕೆಯಾಗಿದೆ. 18,03,696 ಮಂದಿ ಸೋಂಕಿತರ ಪೈಕಿ 1,186,203 ಮಂದಿ ಗುಣಮುಖರಾಗಿದ್ದು, ದೇಶದಲ್ಲಿನ್ನೂ 5,79,357 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಇನ್ನು ರಾಜ್ಯವಾರು ನಿನ್ನೆ ಆಂಧ್ರಪ್ರದೇಶದಲ್ಲಿ 8555 ಸೋಂಕು 64 ಸಾವು, ಮಹಾರಾಷ್ಟ್ರದಲ್ಲಿ 9509 ಸೋಂಕು, 260 ಸಾವು, ತಮಿಳುನಾಡಲ್ಲಿ 5875 ಸೋಂಕು 92 ಸಾವು, ಉತ್ತರಪ್ರದೇಶದಲ್ಲಿ 3873 ಸೋಂಕು 53 ಸಾವು ದಾಖಲಾಗಿದೆ.
Comments are closed.