ರಾಷ್ಟ್ರೀಯ

ಕುಲಭೂಷಣ್ ಜಾಧವ್ ರಾಜತಾಂತ್ರಿಕ ಭೇಟಿಗೆ ಭಾರತಕ್ಕೆ ಮತ್ತೊಂದು ಅವಕಾಶ

Pinterest LinkedIn Tumblr


ನವದೆಹಲಿ: ಬೇಹುಗಾರಿಕೆ ಮತ್ತು ಭಯೋತ್ಪಾದನೆಯ ಆರೋಪದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪಾಕಿಸ್ತಾನದ ಸೆರೆಯಲ್ಲಿರುವ ಭಾರತೀಯ ನೌಕಾಪಡೆಯ ನಿವೃತ್ತ ಯೋಧ ಕುಲಭೂಷಣ್ ಜಾಧವ್ ಅವರ ರಾಜತಾಂತ್ರಿಕ ಭೇಟಿಗೆ ಭಾರತ ಮತ್ತೊಂದು ಅವಕಾಶ ಪಡೆದುಕೊಂಡಿದೆ.

ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಅವರು ಶಿಕ್ಷೆಯನ್ನು ಮರುಪರಿಶೀಲಿಸುವಂತೆ ಕೋರಿ ಪರಿಶೀಲನಾ ಅರ್ಜಿ ಸಲ್ಲಿಸಲು ನಿರಾಕರಿಸಿದ್ದಾರೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಈ ಹಿನ್ನೆಲೆಯಲ್ಲಿ ಜಾಧವ್ ಅವರನ್ನು ಭೇಟಿ ಮಾಡಲು ಬೇಷರತ್ ಅವಕಾಶ ನೀಡುವಂತೆ ಭಾರತ ಪಾಕಿಸ್ತಾನವನ್ನು ಆಗ್ರಹಿಸಿತ್ತು. ಇದೀಗ ಜಾಧವ್ ಭೇಟಿಗೆ ಸಮ್ಮತಿ ನೀಡಲಾಗಿದ್ದು, ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು ದೊರೆತಂತಾಗಿದೆ.

ಕಳೆದ ಸೆಪ್ಟೆಂಬರ್‌ 2019ರಲ್ಲಿ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳಿಗೆ ಜಾಧವ್ ಭೇಟಿಗೆ ಅವಕಾಶ ಕಲ್ಪಿಸಿದ್ದ ಪಾಕಿಸ್ತಾನ, ಇದೀಗ ಎರಡನೇ ಬಾರಿ ಭೇಟಿಗೆ ಸಮ್ಮತಿ ಸೂಚಿಸಿದೆ.

ಕುಲಭೂಷಣ್ ಜಾಧವ್ ಭೇಟಿಗೆ ಅವಕಾಶ ನೀಡುವಂತೆ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು ಪಾಕಿಸ್ತಾನ ವಿದೇಶಾಂಗ ಇಲಾಖೆಯನ್ನು ಆಗ್ರಹಿಸಿತ್ತು. ಅದರಂತೆ ಎರಡು ಗಂಟೆಗಳ ಕಾಲ ಜಾಧವ್ ಅವರನ್ನು ಭೇಟಿ ಮಾಡಲು ಪಾಕ್ ಸಮ್ಮಿತಿಸಿದೆ.

Comments are closed.