ರಾಷ್ಟ್ರೀಯ

ರಾಮ ಮಂದಿರ ಭೂಮಿ ಪೂಜೆಗೆ ಕ್ಷಣಗಣನೆ – ಶಿಲಾನ್ಯಾಸ ನೆರವೇರಿಸಲಿರುವ ಪ್ರಧಾನಿ ನರೇಂದ್ರ ಮೋದಿ

Pinterest LinkedIn Tumblr

ನವದೆಹಲಿ: ದಶಕಗಳ ಹಿಂದಿನ ರಾಮ ಜನ್ಮಭೂಮಿ ವಿವಾದಕ್ಕೆ ತೆರೆ ಬಿದ್ದಿದೆ. ಈ ಬೆನ್ನಲ್ಲೀಗ ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ. ಈ ಭೂಮಿ ಪೂಜೆ ಕಾರ್ಯಕ್ರಮವನ್ನು ದೇಶದ ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಹಾಗೆಯೇ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಜತೆಗೆ ವಿವಿಧ ಕ್ಷೇತ್ರಗಳ 175 ಮಂದಿ ಗಣ್ಯರು ಭಾಗವಹಿಸಲಿದ್ದಾರೆ.

175 ಅತಿಥಿಗಳ ಪೈಕಿ 135 ಮಂದಿ ಸಾಧು-ಸಂತರಿದ್ದಾರೆ. ಕಾರ್ಯಕ್ರಮದಲ್ಲಿ ನೇಪಾಳದ ಸಂತರು ಭಾಗಿಯಾಗುತ್ತಿರುವುದು ವಿಶೇಷ. ಜತೆಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಅಶೋಕ್ ಸಿಂಘಾಲ್ ಕುಟುಂಬ ಪ್ರತಿನಿಧಿಸುವ ಮಹೇಶ್ ಭಗಚಂದ್ಕಾ ಮತ್ತು ಪವನ್ ಸಿಂಘಾಲ್​​ ಕೂಡ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಇವರೆಲ್ಲರಿಗೂ ಪಿಎಂ ಮೋದಿ ಜೊತೆಯಲ್ಲೇ ಆಸನದ ವ್ಯವಸ್ಥೆ ಮಾಡಲಾಗಿದೆ.

ಅಯೋಧ್ಯೆ ಭೂ ವಿವಾದ ಪ್ರಕರಣದ ಮಾಜಿ ದಾವೆದಾರ ಇಕ್ಬಾಲ್ ಅನ್ಸಾರಿ ಮತ್ತು ಮೊಹಮ್ಮದ್ ಷರೀಫ್ ಅವರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ಎಂ.ಎಂ. ಜೋಶಿ, ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್, ಭೂಮಿಪೂಜೆಯಲ್ಲಿ ಭಾಗವಹಿಸುತ್ತಿಲ್ಲ ಎನ್ನಲಾಗಿದೆ.

Comments are closed.