ರಾಷ್ಟ್ರೀಯ

ದೇಶದಲ್ಲಿ ಇಂದು (ರವಿವಾರ) 64,399 ಕೊರೋನಾ ಪ್ರಕರಣಗಳು ಪತ್ತೆ: 861 ಮಂದಿ ಸಾವು

Pinterest LinkedIn Tumblr


ನವದೆಹಲಿ: ಮಾರಕ ಕೊರೋನಾ ವೈರಸ್ ಆರ್ಭಟ ಭಾರತದಲ್ಲಿ ಮತ್ತಷ್ಟು ಜೊರಾಗಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 64,399 ಹೊಸ ಸೋಂಕು ಪ್ರಕರಣ ಪತ್ತೆಯಾಗಿವೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 64,399 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 21 ಲಕ್ಷ ಗಡಿ ದಾಟಿದ್ದು, ಪ್ರಸ್ತುತ ದೇಶದಲ್ಲಿ ಒಟ್ಟಾರೆ ಸೋಂಕು ಪ್ರಕರಣ 21,53,011ಕ್ಕೆ ಏರಿಕೆಯಾಗಿದೆ.

ಈ ಪೈಕಿ 14,80,885 ಸೋಂಕಿತರು ಗುಣಮುಖರಾಗಿದ್ದು, ನಿನ್ನೆ ಒಂದೇ ದಿನ 861 ಮಂದಿ ಸೋಂಕಿತರು ಸಾವನ್ನಪ್ಪುವ ಮೂಲಕ ದೇಶದಲ್ಲಿ 43,379 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಪ್ರಸ್ತುತ ದೇಶದಲ್ಲಿ 6,28,747 ಸಕ್ರಿಯ ಪ್ರಕರಣಗಳಿವೆ.

Comments are closed.