ರಾಷ್ಟ್ರೀಯ

ಒಂದೇ ದಿನ ದೇಶಾದ್ಯಂತ ದಾಖಲೆ ಪ್ರಮಾಣದ ಕೊರೋನಾ ಸೋಂಕಿತರು ಗುಣಮುಖ

Pinterest LinkedIn Tumblr

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಹೆಚ್ಚಾಗುತ್ತಿರುವಂತೆಯೇ ಇತ್ತ ನಿನ್ನೆ ಒಂದೇ ದಿನ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖರಾಗಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 57,584 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಜಾರ್ಜ್ ಆಗಿದ್ದಾರೆ. ಅಂತೆಯೇ ನಿನ್ನೆ ಒಂದೇ ದಿನ ದೇಶದಲ್ಲಿ 55,079 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಇದೇ ಮೊದಲ ಬಾರಿಗೆ ದೇಶದಲ್ಲಿ ಹೊಸ ಸೋಂಕು ಪ್ರಕರಣಗಳಿಗಿಂತ ಗುಣಮುಖರ ಪ್ರಮಾಣ ಹೆಚ್ಚಾಗಿದೆ.

ದೇಶದಲ್ಲಿ ಪ್ರಸ್ತುತ ಒಟ್ಟಾರೆ ಸೋಂಕಿತರ ಸಂಖ್ಯೆ 27,02,743ಕ್ಕೆ ಏರಿಕೆಯಾಗಿದ್ದು, ಈ ಪೈಕಿ 19,77,780 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಅಂತೆಯೇ ದೇಶದಲ್ಲಿ 6,73,166 ಸಕ್ರಿಯ ಪ್ರಕರಣಗಳಿವೆ.

24 ಗಂಟೆಗಳಲ್ಲಿ 8.97 ಲಕ್ಷ ಕೋವಿಡ್ ಪರೀಕ್ಷೆ
ಇನ್ನು ದೇಶದಲ್ಲಿ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 8.97 ಲಕ್ಷ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು. ಇದು ಈ ವರೆಗಿನ ಗರಿಷ್ಠ ಪರೀಕ್ಷಾ ಪ್ರಮಾಣವಾಗಿದೆ. ಗರಿಷ್ಠ ಮಟ್ಟದ ಪರೀಕ್ಷಾ ಪ್ರಮಾಣದ ಹೊರತಾಗಿಯೂ ದೇಶದಲ್ಲಿ ಸೋಂಕಿನ ಪ್ರಮಾಣ ಶೇ.8.81ರಷ್ಟಿದೆ.

Comments are closed.