ರಾಷ್ಟ್ರೀಯ

ಸಿಬಿಎಸ್ಇ 10ನೇ ವಿದ್ಯಾರ್ಥಿಗಳಿಗೆ ಇನ್ನು ಪರೀಕ್ಷೆಯಿಲ್ಲ: ಕೇಂದ್ರ ಸ್ಪಷ್ಟನೆ

Pinterest LinkedIn Tumblr


ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ)ಯ ಹತ್ತನೇ ತರಗತಿ ಪರೀಕ್ಷೆಯ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸ್ಪಷ್ಟನೆ ನೀಡಿದೆ.

ಹತ್ತು ಮತ್ತು ಹನ್ನೆರಡೇ ತರಗತಿಯ ಇನ್ನುಳಿದ ಪರೀಕ್ಷೆಗಳನ್ನು ರದ್ದುಗೊಳಿಸಿದ ಬಳಿಕ ನಿನ್ನೆ ಮಾಧ್ಯಮಗಳಲ್ಲಿ 10ನೇ ತರಗತಿ ಪರೀಕ್ಷೆ ಬಗ್ಗೆ ತಪ್ಪು ವರದಿ ಪ್ರಕಟವಾಗಿದೆ. ಈಗಾಗಲೇ ಮುಗಿದಿರುವ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕ ಮತ್ತು ಇಂಟರ್ನಲ್ ಅಸ್ಸೆಸ್ಸ್ ಮೆಂಟ್ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಲೆಕ್ಕಹಾಕಲಾಗುತ್ತದೆ. ಆದರೆ ಪರೀಕ್ಷೆಗಳನ್ನು ತೆಗೆದುಕೊಂಡಿದ್ದರೆ ಉತ್ತಮ ರೀತಿಯಲ್ಲಿ ಬರೆಯಬಹುದಿತ್ತು ಎಂದು ಭಾವಿಸುವ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ತೆಗೆದುಕೊಳ್ಳಬಹುದು ಎಂದು ಮಾಧ್ಯಮಗಳಲ್ಲಿ ಬಂದಿರುವ ವರದಿ ತಪ್ಪಾಗಿದೆ ಎಂದು ಸಚಿವಾಲಯ ಹೇಳಿದೆ.

ಇನ್ನು 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವುದಿಲ್ಲ. ಮೌಲ್ಯಮಾಪನ ಯೋಜನೆಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿ ಫಲಿತಾಂಶ ಪ್ರಕಟಿಸಲಾಗುತ್ತದೆ ಮತ್ತು ಅದುವೇ ಅಂತಿಮ ಎಂದು ಮಾನವ ಸಂಪನ್ಮೂಲ ಸಚಿವಾಲಯ ಸ್ಪಷ್ಟಪಡಿಸಿದೆ.

Comments are closed.