ರಾಷ್ಟ್ರೀಯ

ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮನದ ಮಾತು ಕೇಳಲಿ: ರಾಹುಲ್ ಗಾಂಧಿ

Pinterest LinkedIn Tumblr

ನವದೆಹಲಿ: ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮನದ ಮಾತು ಕೇಳಲಿ ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಐಐಟಿ ಮತ್ತು ವೈದ್ಯಕೀಯ ಕೋರ್ಸ್ ಗಳಿಗಾಗಿ ಜೆಇಇ ಮತ್ತು ಎನ್ ಇಇಟಿ ಪರೀಕ್ಷೆಗಳು ಮುಂದೂಡಲಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಎನ್ ಇಇಟಿ, ಜೆಇಇ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳ ಮನದ ಮಾತನ್ನು ಕೇಂದ್ರ ಸರ್ಕಾರ ಕೇಳಬೇಕು, ನಂತರ ಸ್ವೀಕರಿಸಹಬಹುದಾದ ಪರಿಹಾರಕ್ಕೆ ಬರಲಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪರೀಕ್ಷೆ ಮುಂದೂಡುವಂತೆ ಪೋಷಕರು ಸಲ್ಲಿಸಿರುವ ಅರ್ಜಿ ಸುಪ್ರೀಂಕೋರ್ಟಿನಲ್ಲಿ ವಿಚಾರಣೆಗೆ ಬರುತ್ತಿರುವಂತೆಯೇ ರಾಹುಲ್ ಗಾಂಧಿ ಪೋಷಕರ ಬೇಡಿಕೆಯನ್ನು ಬೆಂಬಲಿಸಿದ್ದಾರೆ.

ಪರ್ಯಾಯ ವ್ಯವಸ್ಥೆ ಮಾಡುವುದರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕೆಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೊಡಿಯಾ ಹೇಳಿಕೆ ನೀಡಿದ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Comments are closed.