ರಾಷ್ಟ್ರೀಯ

ದೆಹಲಿ ಗಲಭೆ ಪ್ರಕರಣ: ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನ

Pinterest LinkedIn Tumblr

ನವದೆಹಲಿ: ಫೆಬ್ರವರಿ ತಿಂಗಳಿನಲ್ಲಿ ದೆಹಲಿ ಹಾಗೂ ಈಶಾನ್ಯ ರಾಜ್ಯಗಳಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ಯೂನಿರ್ವಸಿಟಿಯ (ಜೆ.ಎನ್.ಯು) ಹಳೇ ವಿದ್ಯಾರ್ಥಿ ಉಮರ್ ಖಾಲಿದ್ ಎಂಬಾತನನ್ನು ದೆಹಲಿ ವಿಶೇಷ ಪೊಲೀಸ್ ಪಡೆ ಬಂಧಿಸಿರುವುದಾಗಿ ಸೋಮವಾರ ವರದಿಯಾಗಿದೆ.

ಗಲಭೆಗೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣದಲ್ಲಿ ಉಮರ್ ಖಾಲಿದ್ ವಿರುದ್ಧ ಅಪರಾಧ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)ಯಡಿ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೇ ಖಾಲಿದ್ ಮೊಬೈಲ್ ಫೋನ್ ಅನ್ನು ಕೂಡಾ ವಶಪಡಿಸಿಕೊಳ್ಳಲಾಗಿತ್ತು. ಸತತ 11 ಗಂಟೆಗಳ ವಿಚಾರಣೆ ಬಳಿಕ ದೆಹಲಿ ವಿಶೇಷ ಪೊಲೀಸ್ ಪಡೆ ದೆಹಲಿ ಗಲಭೆ ಪ್ರಕರಣದ ಒಳಸಂಚಿನ ಆರೋಪದಡಿ ಉಮರ್ ಖಾಲಿದ್ ನನ್ನು ಬಂಧಿಸಿರುವುದಾಗಿ ಎಂದು ಪಿಟಿಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.ದೆಹಲಿಯಲ್ಲಿ ನಡೆದಿದ್ದ ಪ್ರತಿಭಟನೆಯನ್ನು ಗಲಭೆಯನ್ನಾಗಿ ಪರಿವರ್ತಿಸಲಾಗಿತ್ತು ಎಂಬ ಬಗ್ಗೆ ತನಿಖೆಯಿಂದ ತಿಳಿದು ಬಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈಶಾನ್ಯ ದೆಹಲಿಯ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಒಂದು ವಾರದ ನಂತರ ಫೆಬ್ರುವರಿ 23ರಿಂದ 26ರವರೆಗೆ ಗಲಭೆಗೆ ತಿರುಗಿತ್ತು. ಈ ವೇಳೆ ನಡೆದ ಹಿಂಸಾಚಾರದಲ್ಲಿ ಸುಮಾರು 50 ಮಂದಿ ಸಾವನ್ನಪ್ಪಿದ್ದರು. ಇದರಲ್ಲಿ ಹಲವರು ಗುಂಡೇಟಿನ ಗಾಯದಿಂದ ಸಾವನ್ನಪ್ಪಿರುವುದಾಗಿ ವರದಿ ಹೇಳಿದೆ.

ಉಮರ್ ಖಾಲಿದ್ ಬಂಧನ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿತ್ತು. ದೆಹಲಿ ಗಲಭೆಯ ಆರೋಪಿ ಹೆಸರನ್ನು ಬಹಿರಂಗಗೊಳಿಸಿರುವುದಕ್ಕೆ ಸಿಪಿಎಂ ಮುಖಂಡ ಸೀತಾರಾಮ್ ಯೆಚೂರಿ ಮತ್ತು ಸ್ವರಾಜ್ ಅಭಿಯಾನ್ ಮುಖ್ಯಸ್ಥ ಯೋಗೇಂದ್ರ ಯಾದವ್ ಆಕ್ಷೇಪ ವ್ಯಕ್ತಪಡಿಸಿದ್ದರು.

 

Comments are closed.