ರಾಷ್ಟ್ರೀಯ

ದೆಹಲಿ ಪ್ರವಾಸ ಹಾಗು ಸಂಪುಟ ವಿಸ್ತರಣೆಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದೇನು…?

Pinterest LinkedIn Tumblr

ನವದೆಹಲಿ: ಸಂಪುಟ ವಿಸ್ತರಣೆ, ನೆರೆ ಪರಿಹಾರ ಮೊದಲಾದ ವಿಚಾರಗಳ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ದೆಹಲಿಗೆ ತೆರಳಿದ್ದರು. ಶುಕ್ರವಾರ ಪ್ರಧಾನಿ ನೇರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ಕೂಡ ನಡೆಸಿದ್ದರು. ಈಗ ಬಿಎಸ್​ವೈ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ್ದಾರೆ. ಮುಂದಿನ ಸೋಮವಾರ ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಮಾಡಬೇಕೆಂಬುದು ತಮ್ಮ ಅಪೇಕ್ಷೆಯಾಗಿದೆ ಎಂದು ಅವರು ತಿಳಿಸಿದರು.

ದೆಹಲಿ ಪ್ರವಾಸ ಅತ್ಯಂತ ಯಶಸ್ವಿಯಾಗಿದೆ. ಪ್ರಧಾನಿ ಅವರಿಂದ ಹಿಡಿದು ಎಲ್ಲಾ ಸಚಿವರು ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಯೋಜನೆಗಳಿಗೆ ಬಹುತೇಕ ಒಪ್ಪಿಗೆ ನೀಡುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಅವರು ಸೂಕ್ತ ರೀತಿಯ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಿ.ಎಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ದೆಹಲಿಯಲ್ಲಿಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಹುತೇಕ ಸಚಿವರು ರಾಜ್ಯದ ಅಭಿವೃದ್ಧಿ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿನ್ನೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡಿದ್ದೇನೆ. ಅವರು ಇಂದು ಪ್ರಧಾನಿಯವರ ಜೊತೆ ಚರ್ಚಿಸಿ ಇಂದೇ ಸೂಚನೆ ನೀಡಬಹುದು. ಅವರ ಸೂಚನೆಯನ್ನು ಆಧರಿಸಿ ಮುಂದಿನ ಕ್ರಮಕೈಗೊಳ್ಳುತ್ತೇವೆ.

ಸಂಪುಟಕ್ಕೆ ಎಷ್ಟು ಜನರು ಸೇರುತ್ತಾರೆ ಎಂಬುದನ್ನು ಜೆ.ಪಿ.ನಡ್ಡಾ ಮತ್ತು ಪ್ರಧಾನಿಯವರು ಚರ್ಚಿಸಿ ಸೂಚನೆ ನೀಡಲಿದ್ದಾರೆ. ಅಧಿವೇಶನದ ಮೊದಲೇ ಸಂಪುಟ ವಿಸ್ತರಣೆ ಮಾಡಬೇಕು ಎಂಬುದು ತಮ್ಮ ಅಪೇಕ್ಷೆಯಾಗಿದೆ. ಇವತ್ತು, ನಾಳೆಯೊಳಗೆ ಅವರು ತಿಳಿಸಬೇಕು ಎಂಬ ಅಪೇಕ್ಷೆ ಇದೆ. ಅವರು ಯಾವ ತೀರ್ಮಾನ ಕೈಗೊಳ್ಳುತ್ತಾರೋ ಕಾದು ನೋಡಬೇಕು ಎಂದು ಪ್ರಶ್ನೆಯೊಂದಕ್ಕೆ ಮುಖ್ಯಮಂತ್ರಿ ಪ್ರತಿಕ್ರಿಯಿಸಿದರು.

Comments are closed.